ಮಡಿಕೇರಿ, ಜು.೨೨: ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬAಧಿಸಿದAತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಧರ್ಮಜ ಉತ್ತಪ್ಪ ಸರ್ಕಾರ ಶಕ್ತಿ, ಗೃಹಲಕ್ಷಿö್ಮ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆ ಗಳನ್ನು ಅರ್ಹರಿಗೆ ತಲುಪಿಸಬೇಕು.

ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದAತೆ ಗಮನ ಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆ ಗಳನ್ನು ತಲುಪಿಸುವಂತೆ ಸಲಹೆ ಮಾಡಿದರು. ಶಕ್ತಿ, ಗೃಹಲಕ್ಷಿö್ಮ, ಗೃಹಜ್ಯೋತಿ,

(ಮೊದಲ ಪುಟದಿಂದ) ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಹೇಳಿದರು.

ಕುಶಾಲನಗರ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಮಾಹಿತಿ ನೀಡಿ ಜಿಲ್ಲೆಯಲ್ಲಿ ೧.೩೦ ಲಕ್ಷ ಗುರಿಯಲ್ಲಿ ೯೭,೫೭೦ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.೯೮ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತಿ ತಿಂಗಳು ೩೦೦೦ ಮತ್ತು ೧೫೦೦ ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ೫೬೨ ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ ಇದುವರೆಗೆ ೧೦೩೦ ಮಂದಿ ಹೆಸರು ನೋಂದಾಯಿಸಿಕೊAಡಿದ್ದಾರೆ ಎಂದು ರೇಖಾ ಗಣಪತಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಅವರು ಗೃಹಲಕ್ಷಿö್ಮ ಯೋಜನೆ ಸಂಬAಧಿಸಿದAತೆ ಮಾಹಿತಿ ನೀಡಿ ಜೂನ್‌ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ. ಜಿಲ್ಲೆಯಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ೧,೧೫,೨೨೯ ಮಂದಿ ಹೆಸರು ನೋಂದಣಿಯಾಗಿದ್ದು, ೧,೧೪,೦೫೬ ಮಂದಿ ಮಂಜೂರಾಗಿದ್ದು, ಶೇ.೯೮.೯೮ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ಅವರು ತಿಳಿಸಿದರು.

ಸೆಸ್ಕ್ ಎಇಇ ವಿನಯ್ ಕುಮಾರ್ ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ೧,೫೩,೬೨೩ ಕುಟುಂಬಗಳಲ್ಲಿ ೧,೫೧,೯೦೭ ಕುಟುಂಬಗಳು ನೋಂದಣಿಯಾಗಿದ್ದು, ಶೇ.೯೮.೮೮ ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ ೫೯೦೫.೩೦ ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದರು. ಶಕ್ತಿ ಯೋಜನೆಯಡಿ ಆರಂಭದಿAದ ಇದುವರೆಗೆ ೬೨,೦೪,೬೧೮ ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, ೨೪.೬೫ ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕ ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷರಾದ ಮೋಹನ್‌ದಾಸ್(ಮಡಿಕೇರಿ), ಜಾನ್ಸನ್ (ವೀರಾಜಪೇಟೆ) ಇತರರು ಇದ್ದರು.