ಮಡಿಕೇರಿ, ಜು. ೨೨: ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೫-೨೬ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿಯನ್ನು ಸೆಪ್ಟೆಂಬರ್ ೧೬ ರೊಳಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಸಲ್ಲಿಸಬಹುದು. ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರಾಥಮಿಕ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ೨೦೨೩ ರ ಮೇ ೧ ರಿಂದ ೨೦೨೫ ರ ಜುಲೈ ೩೧ ರೊಳಗೆ ಜನಿಸಿದವರಾಗಿರ ಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೬ ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು hಣಣಠಿs://ಟಿಚಿvoಜಚಿಥಿಚಿ.gov.iಟಿ ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಪಂಕಜಾಕ್ಷನ್ ತಿಳಿಸಿದ್ದಾರೆ.