ಮಡಿಕೇರಿ, ಜು. ೨೨: ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು-ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ. ೬ ರ ಬಡ್ಡಿ ಸಹಾಯಧನ ನೀಡಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ ರೂ. ೬೫ ಸಾವಿರ ಸಾಲದ ಮೊತ್ತಕ್ಕೆ ಶೇ. ೬ ಬಡ್ಡಿ ಸಹಾಯಧನ (ರೂ. ೩,೬೨೫) ನೀಡಲಾಗುತ್ತದೆ. ಪ್ರತಿ ಹಸು-ಎಮ್ಮೆ ಘಟಕದ ಮೊತ್ತ ರೂ. ೬೫,೦೦೦, ಶೇ. ೬ ವಾರ್ಷಿಕ ಬಡ್ಡಿ ಸಹಾಯಧನದ ಪ್ರತಿ ಫಲಾನುಭವಿಗೆ ಗರಿಷ್ಠ ರೂ. ೩,೬೨೪.೫೦/-(೩೬೨೫).

ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬAಧಪಟ್ಟ ಪಶು ಆಸ್ಪತ್ರೆಗಳನ್ನು ಸಂರ್ಪಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ ತಿಳಿಸಿದ್ದಾರೆ.