ಮಡಿಕೇರಿ, ಜು. ೨೪: ಮೂರ್ನಾಡು ಮಾರುತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಂಘದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಮುಂಡAಡ ಅಪ್ಪಚ್ಚು ಉದ್ಘಾಟಿಸಿದರು.

ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ದಮಯಂತಿ ಪ್ರಮಾಣ ವಚನ ಬೋಧಿಸಿದರು. ಕಾಲೇಜು ನಾಯಕಿಯಾಗಿ ದ್ವಿತೀಯ ಪಿ.ಯು.ಸಿ.ಯ ಫಾತಿಮಾ ಸಫೀದ, ಉಪನಾಯಕಿಯಾಗಿ ಅನುಷಿಕಾ ಬೋಜಮ್ಮ, ಶಾಲಾ ನಾಯಕಿಯಾಗಿ ಹತ್ತನೇ ತರಗತಿಯ ಜೀವಿತ, ಉಪನಾಯಕನಾಗಿ ಅಭಿಷೇಕ್ ರೈ ವಿದ್ಯಾರ್ಥಿಗಳ ಚುನಾವಣೆ ಮೂಲಕ ಆಯ್ಕೆಗೊಂಡರು. ಇದಲ್ಲದೆ ಕ್ರೀಡೆ, ಸಾಂಸ್ಕೃತಿಕ, ಶಿಸ್ತು ಸೇರಿದಂತೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸಿದರು.

ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಗಿಲ್ ಸೋಮಯ್ಯ, ಕಾರ್ಯದರ್ಶಿ ಬಡುವಂಡ ಅರುಣ್ ಅಪ್ಪಚ್ಚು, ಮುಂಡAಡ ನೀಲವ್ವ, ಸಂಸ್ಥೆಯ ಉಪಪ್ರಾಂಶುಪಾಲೆ ಹೇಮಾವತಿ ಎಂ.ಡಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.