ಕಣಿವೆ, ಜು. ೨೪: ಇಲ್ಲಿಗೆ ಸಮೀಪದ ಮದಲಾಪುರದ ಬ್ಯಾಡಗೊಟ್ಟ ಅಂಗನವಾಡಿ ಪರಿಸರ ಕುಡುಕರ ಅಡ್ಡೆಯಾಗುತ್ತಿದ್ದು, ಅಂಗನವಾಡಿ ಸುತ್ತಮುತ್ತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಈ ಬ್ಯಾಡಗೊಟ್ಟದ ಅಂಗನವಾಡಿ ಪರಿಸರ ಹಾಳಾಗಿದ್ದರೂ ಕೂಡ ಸ್ಥಳೀಯ ಗ್ರಾಮ ಪಂಚಾಯಿತಿ ಯಾಗಲಿ, ಸಂಬAಧಿತ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಮಂದಿ ಗಮನ ಹರಿಸುತ್ತಿಲ್ಲ ಎಂಬ ದೂರು ಇಲ್ಲಿನ ಮಹಿಳೆಯರದ್ದಾಗಿದೆ. ಬೆಳಿಗ್ಗೆ ಐದು ಗಂಟೆಯಿAದಲೇ ಮನೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.