ರನ್‌ವೇಯಿಂದ ಜಾರಿ ವಿಮಾನ ಪತನ: ೧೮ ಮಂದಿ ಸಾವು

ಕಠ್ಮಂಡು, ಜು. ೨೪: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ ೧೯ ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, ೧೮ ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ದೇಶೀಯ ಶೌರ್ಯ ಏರ್‌ಲೈನ್‌ಗೆ ಸೇರಿದ್ದು, ಹಿಮಾಲಯ ಗಣರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾದ ಪೋಖರಾದ ರೆಸಾರ್ಟ್ ಪಟ್ಟಣಕ್ಕೆ ತೆರಳುತ್ತಿತ್ತು, ಇಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಶೌರ್ಯ ಏರ್‌ಲೈನ್ಸ್ ವಿಮಾನವು ಪರೀಕ್ಷಾ ಹಾರಾಟಕ್ಕಾಗಿ ಇಬ್ಬರು ಸದಸ್ಯರನ್ನೊಳಗೊಂಡ ಸಿಬ್ಬಂದಿ ಮತ್ತು ಕಂಪೆನಿಯ ೧೭ ಸಿಬ್ಬಂದಿಯನ್ನು ಪರೀಕ್ಷಾರ್ಥ ಉಡಾವಣೆಯಾಗಿ ಹೊತ್ತೊಯ್ಯುತ್ತಿತ್ತು. ವಿಮಾನದ ಪೈಲಟ್‌ನನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನೇಪಾಳಿ ಪೊಲೀಸ್ ವಕ್ತಾರ ಡಾನ್ ಬಹದ್ದೂರ್ ಕರ್ಕಿ ತಿಳಿಸಿದ್ದಾರೆ. ನೇಪಾಳದ ಮಿಲಿಟರಿ ತಂಡ ಹಂಚಿಕೊAಡ ಚಿತ್ರಗಳು ವಿಮಾನದ ಫ್ಯೂಸ್ಲೇಜ್ ಬೇರ್ಪಟ್ಟು ಸುಟ್ಟುಹೋಗಿವೆ. ಸುಮಾರು ಹನ್ನೆರಡು ಸೈನಿಕರು ಭಗ್ನಾವಶೇಷಗಳ ಮೇಲೆ ನಿಂತಿದ್ದಾರೆ. ನ್ಯೂಸ್ ಪೋರ್ಟಲ್ ಖಬರ್‌ಹಬ್, ರನ್‌ವೇಯಲ್ಲಿ ಸ್ಕಿಡ್ ಆದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಗAಗಾವಳಿ ನದಿಯಲ್ಲಿ ಟ್ರಕ್ ಇರುವ ಸ್ಥಳ ಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ

ಶಿರೂರು, ಜು. ೨೪: ಶಿರೂರಿನಲ್ಲಿ ಕಳೆದ ವಾರ ಸಂಭವಿಸಿದ್ದ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಅರ್ಜುನ್‌ಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿರುವಂತೆಯೇ ಪಕ್ಕದ ಗಂಗಾವಳಿ ನದಿಯಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕರ್ನಾಟಕ ಸರ್ಕಾರ ಖಚಿತಪಡಿಸಿದೆ. ಶಿರೂರಿನಲ್ಲಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿದ್ದು, ನೀರಿನಲ್ಲಿ ಮುಳುಗಿರುವ ಟ್ರಕ್‌ಅನ್ನು ಈಗ ಗುರುತಿಸಲಾಗಿದೆ ಮತ್ತು ಅದನ್ನು ಮೇಲಕ್ಕೆ ಎತ್ತಲು ಕಾರ್ಯಾಚರಣೆ ರೂಪಿಸಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ನಲ್ಲಿ ಮಾಹಿತಿ ನೀಡಿದ್ದು, ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಮೇಲೆತ್ತಲಿದ್ದಾರೆ. ಅಂತೆಯೇ ನದಿಯಲ್ಲಿನ ಹೂಳೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು. ಸುಧಾರಿತ ಡ್ರೋನ್ ಆಧಾರಿತ ಇಂಟೆಲಿಜೆAಟ್ ಅಂಡರ್‌ಗ್ರೌAಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್‌ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ಕೋಸ್ಟ್ಗಾರ್ಡ್ ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಅಮೇರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋಯಿಂದ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ನೌಕಾಪಡೆ ಮತ್ತು ರಾಷ್ಟಿçÃಯ ವಿಪತ್ತು ದಳ ಮಹತ್ವದ ನೆರವು ಸಿಕ್ಕಿದೆ. ಜಿಲ್ಲಾ ಪೊಲೀಸ್ ಮುಖ್ಯಸ್ಥ ನಾರಾಯಣ್ ಮತ್ತು ಅವರ ತಂಡದ ಸಂಘಟಿತ ಪ್ರಯತ್ನದಿಂದಾಗಿ ಟ್ರಕ್ ಇರುವ ಸ್ಥಳವನ್ನು ಗುರುತಿಸಲು ಸಾಧ್ಯವಾಯಿತು.

ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದ ಸ್ಪೀಕರ್

ಬೆಂಗಳೂರು, ಜು. ೨೪: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಸದನದಲ್ಲಿ ಪಟ್ಟು ಹಿಡಿಯಿತು. ಆದರೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಚರ್ಚೆಗೆ ಅವಕಾಶ ನಿರಾಕರಿಸಿದರು. ಇಂದು ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್, ನಿಯಮಾವಳಿಗಳನ್ನು ಉಲ್ಲೇಖಿಸಿ, ಈ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ನೀಡದಂತೆ ಸ್ಪೀಕರ್‌ಗೆ ಒತ್ತಾಯಿಸಿದರೆ, ಪ್ರತಿಪಕ್ಷ ಬಿಜೆಪಿ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತು. ಬಿಜೆಪಿ ಆಗ್ರಹಕ್ಕೆ ಮಣಿಯದ ಸ್ಪೀಕರ್, ಚರ್ಚೆಗೆ ಅವಕಾಶ ನಿರಾಕರಿಸಿದರು. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಅಲ್ಲಿ ಹೋಗಿ ದಾಖಲೆ ಕೊಡಿ ಎಂದು ಹೇಳಿದರು. ಈ ವೇಳೆ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಸ್ಪೀಕರ್ ಒನ್ ಸೈಡ್, ಸಿಎಂಗೆ ಮುಡಾ ಸೈಟ್ ಎಂಬ ಘೋಷಣೆ ಕೂಗಿದರು. ಪ್ರತಿಪಕ್ಷ ಸದಸ್ಯರಿಗೆ ಕುಳಿತು ಕೊಳ್ಳುವಂತೆ ಸ್ಪೀಕರ್ ಮನವಿ ಮಾಡಿದರೂ, ಸದನದ ಬಾವಿಗಿಳಿದ ಬಿಜೆಪಿ- ಜೆಡಿಎಸ್ ಸದಸ್ಯರಿಂದ ಧರಣಿ ನಡೆಸಿದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಹತ್ತು ನಿಮಿಷಗಳ ಕಾಲ ಸ್ಪೀಕರ್ ಖಾದರ್ ಮುಂದೂಡಿದರು. ಕಲಾಪ ಮತ್ತೆ ಆರಂಭವಾದಾಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಮಾತನಾಡಿ, ನಿಯಮಗಳ ಪ್ರಕಾರ ಚರ್ಚೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸದನದಲ್ಲಿ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದರು. ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಇಂದಿನಿAದ ಸದನದಲ್ಲಿ ರಾತ್ರಿಯಿಡೀ ಧರಣಿ ನಡೆಸುವುದಾಗಿ ಘೋಷಣೆ ಮಾಡಿದರು.