ಮಡಿಕೇರಿ, ಜು. ೨೪: ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು ೨೫ ಸಾವಿರ ಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬAಧಿಸಿದAತೆ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಎಸ್ಸಿ ಮೋರ್ಚಾ ಮತ್ತು ಎಸ್ ಟಿ ಮೋರ್ಚಾದ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಸುಮಾರು ಹದಿನೈದು ಸಾವಿರಕ್ಕಿಂತ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೊಡಗು ಜಿಲ್ಲೆಯಿಂದಲೂ ಎಸ್.ಸಿ ಮತ್ತು ಎಸ್.ಟಿ ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು. ಫ್ರೀಡಂ ಪಾರ್ಕ್ನಲ್ಲಿ ಸಭೆ ನಡೆದ ನಂತರ ವಿಧಾನಸೌಧಕ್ಕೆ ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ಮುತ್ತಿಕ್ಕುವ ಸಂದರ್ಭ ಪೊಲೀಸರ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ನೂಕು ನುಗ್ಗಲು ಉಂಟಾಗಿ ದೊಡ್ಡ ರೀತಿಯ ಪ್ರತಿಭಟನೆ ನಡೆಯಿತು. ಈ ಸಂದರ್ಭ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಸಂಸದರು, ಶಾಸಕರುಗಳು, ಕಾರ್ಯಕರ್ತರುಗಳನ್ನು ಬಂಧಿಸಲಾಯಿತು. ಕೊಡಗು ಜಿಲ್ಲೆಯಿಂದ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಮೊಗೇರ, ಎಸ್.ಟಿ ಮೊರ್ಚಾದ ಜಿಲ್ಲಾಧ್ಯಕ್ಷ ಪರಮೇಶ್ವರ, ಮೋರ್ಚಾದ ಉಪಾಧ್ಯಕ್ಷ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ಚೇತನ್ ಶಿವಪ್ಪ, ವೀರಾಜಪೇಟೆ ಮಂಡಲ ಅಧ್ಯಕ್ಷ ಅಭಿಜಿತ್, ಸೋಮವಾರಪೇಟೆ ಮಂಡಲ ಅಧ್ಯಕ್ಷ ಜಗನಾಥ್, ಹೀರಾ ಸುಬ್ಬಯ್ಯ, ಸುಶೀಲ, ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು