ಮಡಿಕೇರಿ, ಜು. ೨೪: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೪-೨೫ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸ ಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ: ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ರ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆ ದಿನವಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರ ಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩, ವಿಶೇಷಚೇತನರಿಗೆ ಶೇ. ೫ ಹಾಗೂ ತೃತೀಯ ಲಿಂಗಳಿಗೆ ಶೇ. ೫ ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ).

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.೩ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ರೂ. ೧ ಲಕ್ಷ ಸಾಲ ಒದಗಿಸಲಾಗು ವುದು. ಈ ಮೊತ್ತದಲ್ಲಿ ಶೇ.೨೦ ರಷ್ಟು ಸಹಾಯಧನ ಹಾಗೂ ಶೇ. ೮೦ ರಷ್ಟು ಸಾಲವನ್ನು ವಾರ್ಷಿಕ ಶೇ.೪ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗು ವುದು, ೨ ತಿಂಗಳ ವಿರಾಮ ಅವಧಿ ಇರುತ್ತದೆ. ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ೨೦೧೯-೨೦ ಮತ್ತು ೨೦೨೦-೨೧ನೇ ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿದ್ದಲ್ಲಿ, ಪುನಃ ಅರ್ಜಿ ಸಲ್ಲಿಸಲು ಅವಕಾಶವಿದೆ.

ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆಯ ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. ೬ ಲಕ್ಷಗಳ ಮಿತಿಯೊಳಗಿರಬೇಕು. ೨೧ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರ ಬೇಕು. ಅಭ್ಯರ್ಥಿಯು ಯೆಲ್ಲೋ ಬೋರ್ಡ್ (ಎಲೆಕ್ಟಿçಕ್/ಸಿ.ಎನ್.ಜಿ) ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನವನ್ನು ಖರೀದಿಸಲು ನಿಗಮದಿಂದ ರೂ. ೧ ಲಕ್ಷದವರೆಗೆ ಸಬ್ಸಿಡಿ ನೀಡಲಾಗುವುದು. ಬಾಕಿ ಮೊತ್ತವನ್ನು ಯಾವುದಾದರೂ ಬ್ಯಾಂಕ್‌ಗಳಿAದ ಸಾಲ ಪಡೆಯಬೇಕಿದೆ. ವಾಹನವನ್ನು ಆಹಾರ ವಾಹಿನಿಯನ್ನಾಗಿ ಪರಿವರ್ತಿಸಿದ್ದಲ್ಲಿ ಮಾತ್ರ ಎರಡನೇ ಕಂತಿನ ಮೊತ್ತ ರೂ. ೧ ಲಕ್ಷಗಳ ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗೆ ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು: ಈ ಯೋಜನೆಯಡಿ ೨ ರಿಂದ ೧೫ ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. ೬ ಲಕ್ಷಗಳ ಮಿತಿಯೊಳಗಿರಬೇಕು. ೨೧ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಗರಿಷ್ಠ ರೂ. ೨ ಲಕ್ಷಗಳ ಸಾಲವನ್ನು ವಾರ್ಷಿಕ ಶೇ. ೪ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದ್ದೀಕರಣಕ್ಕಾಗಿ ರೂ. ೫೦ ಸಾವಿರಗಳ ಸಹಾಯಧನ ನೀಡಲಾಗುವುದು. ೬ ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಎಚ್‌ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. ೧ ಲಕ್ಷಗಳ ಸಾಲವನ್ನು ಶೇ. ೨ ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ ೪ ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು ೩೬ ಮಾಸಿಕ ಕಂತುಗಳಲ್ಲಿ ಮರು ಪಾವತಿಸಬೇಕು. ೧೮ ವರ್ಷ ಮೇಲ್ಪಟ್ಟು ೩೫ ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. ೬ ಲಕ್ಷಗಳ ಮಿತಿಯೊಳಗಿರ ಬೇಕು. (ಈ ಯೋಜನೆಗೆ ಸಂಬAಧಪಟ್ಟAತೆ ಸಿ.ಇ.ಟಿ ಮತ್ತು ನೀಟ್ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು).

ಈ ಯೋಜನೆಗಳ ಮಾರ್ಗಸೂಚಿ ಹಾಗೂ ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಈ ಕ್ಯೂ ಆರ್ ಕೋಡ್‌ಅನ್ನು ಗೂಗಲ್‌ನಲ್ಲಿ ಸ್ಕಾö್ಯನ್ ಮಾಡಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: ೯೪೪೮೪೫೧೧೧೧ (ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಂಪರ್ಕಿಸಬಹುದಾಗಿದೆ) ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭಿಸಲಾದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ಮತ್ತು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮಡಿಕೇರಿ ಇಲ್ಲಿಗೆ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌಲಭ್ಯಗಳ ವಿವರ: ಉಚಿತ ದಾಖಲಾತಿ (ಶುಲ್ಕ ರಹಿತ), ಉಚಿತ ಹಾಸ್ಟೇಲ್ ಸೌಲಭ್ಯ, ಮೆನು ಚಾರ್ಟ್ ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, ಪ್ರತಿ ತಿಂಗಳಿಗೆ ಉಚಿತ “ಶುಚಿ ಸಂಭ್ರಮ ಕಿಟ್” (ಸೋಪು, ಪೇಸ್ಟ್, ಬ್ರಷ್, ತೆಂಗಿನಎಣ್ಣೆ), ಉಚಿತ ಆರೋಗ್ಯ ತಪಾಸಣೆ, ಗ್ರಂಥಾಲಯ ಹಾಗೂ ಕಂಪ್ಯೂಟರ್ ಸೌಲಭ್ಯಗಳು. ಆಸಕ್ತ ವಿದ್ಯಾರ್ಥಿಗಳು, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಅವರ ಕಚೇರಿ ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-೧) ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲೂಕು ಅವರ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕ ಪಟ್ಟಿಯನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ. ೯೪೮೦೮೪೩೧೫೫ ಹಾಗೂ ೦೮೨೭೨ -೨೦೦೫೦೦ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.