ಮಡಿಕೇರಿ, ಜು. ೨೪: ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಾಣ ಮಾಡಬೇಕು. ಜೊತೆಗೆ ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದ್ದಾರೆ.

ನವದೆಹಲಿಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವತಿಯಿಂದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಸೈಬರ್ ಸುರಕ್ಷತೆ ಸೇರಿದಂತೆ ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಅಂತರ್ಜಾಲ ಹಾಗೂ ಮೊಬೈಲ್ ಯುಗದಲ್ಲಿ ಒಳಿತು-ಕೆಡುಕುಗಳ ಬಗ್ಗೆ ನಿಗಾವಹಿಸಬೇಕಿದೆ. ಆದ್ದರಿಂದ ಒಳಿತನ್ನು ಬಳಸಿಕೊಂಡು ಕೆಡುಕುಗಳನ್ನು ನಿರ್ಬಂಧಿಸಲು ಅವಕಾಶವಿದೆ. ಶಾಲೆಯಲ್ಲಿ ಪಾಠದ ಜೊತೆಗೆ ಆಟೋಟ, ಸಂಗೀತ, ಕಲೆ, ಸಾಹಿತ್ಯ ಹೀಗೆ ಹಲವು ಉತ್ತಮ ಪರಿಸರವನ್ನು ನಿರ್ಮಾಣ ಮಾಡಬೇಕು.

ಮನೆಯಲ್ಲಿ ಮತ್ತು ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ವಾತಾವರಣ ಇದ್ದಲ್ಲಿ ಮಕ್ಕಳು ಅದನ್ನು ಅನುಸರಿಸುತ್ತಾರೆ. ಇದರಿಂದ ಕಲಿಕಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ.

ಸಮಾಜದಲ್ಲಿ ಮಕ್ಕಳು ಉತ್ತಮ ನಾಗರಿಕರಾಗಿ ಬೆಳೆಯುವಂತಾಗಲು ಸರಿಯಾದ ಮಾಹಿತಿ ಮತ್ತು ಮಾರ್ಗದರ್ಶನ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು. ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲರೂ ಮಕ್ಕಳಲ್ಲಿ ಸಂವೇದನಾಶೀಲತೆ ಬೆಳೆಸಬೇಕು ಎಂದರು.

ರಾಷ್ಟಿçÃಯ ಮಕ್ಕಳ ಹಕ್ಕುಗಳ ಆಯೋಗದ ಪ್ರತಿನಿಧಿ ಡಾ. ಋಷಿ ತಮನ್ನ ಅವರು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ರಕ್ಷಣೆ ವಹಿಸಬೇಕಾದ ಪಾತ್ರ ಕುರಿತು ಮಾತನಾಡಿ, ಮಕ್ಕಳಿಗೆ ಕನಿಷ್ಟ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಮಕ್ಕಳಿಗೆ ಯಾವುದೇ ಕಾರಣಕ್ಕೂ ಕಿರುಕುಳ ನೀಡಬಾರದು. ಮಕ್ಕಳನ್ನು ಗೌರವಿಸಬೇಕು. ಮೊಬೈಲ್ ಬಳಕೆಯಿಂದ ಕಾಲಹರಣವಾಗುತ್ತದೆಯೇ ಹೊರತು, ಗುರಿ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಕೂಡಿಗೆಯ ಡಯಟ್ ಪ್ರಾಂಶುಪಾಲ ಎಂ. ಚಂದ್ರಕಾAತ್ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಮಕ್ಕಳಾಗಿರಬೇಕು. ಪೋಷಕರು ಪೋಷಕರಾಗಿರಬೇಕು. ಆದರೆ ಇವರ ಪಾತ್ರ ಬದಲಾಗುತ್ತಿದೆ.

ಬಾಲ್ಯ ವಿವಾಹ, ಬಾಲಾಪರಾಧ ಪ್ರಕರಣಗಳನ್ನು ತಡೆಯಬೇಕು. ಸಮಾಜದ ಅಭಿವೃದ್ಧಿ ಅಥವಾ ರಾಷ್ಟçದ ಅಭಿವೃದ್ಧಿ ಎಂದರೆ ಎಲ್ಲರೂ ಒಳಗೊಳ್ಳುವ, ಎಲ್ಲರೂ ಅಭಿವೃದ್ಧಿಯಾಗುವ ಮನೋಭಾವ ಬರಬೇಕು. ಹಾಗಾದಾಗ ಮಾತ್ರ ಸಮಾಜದ ಅಭಿವೃದ್ಧಿ ಕಾಣಬಹುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿದರು. ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಸೌಮ್ಯ ಪೊನ್ನಪ್ಪ, ಎಂ. ಕೃಷ್ಣಪ್ಪ, ಶಿಕ್ಷಣಾಧಿಕಾರಿ ಎಂ. ಮಹಾದೇವಸ್ವಾಮಿ, ವಿಷಯ ಪರಿವೀಕ್ಷಕಿ ಬಿಂಧು, ಪೊಲೀಸ್ ಇಲಾಖೆಯ ಸುಮತಿ ಅವರು ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ಕುರಿತು ಮಾತನಾಡಿದರು.