ಸಿದ್ದಾಪುರ, ಜು. ೨೪: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಗುಹ್ಯ ಗ್ರಾಮದಲ್ಲಿ ಇದೀಗ ಹುಲಿ ಹೆಜ್ಜೆ ಪತ್ತೆಯಾಗಿದೆ. ಗುಹ್ಯ ಗ್ರಾಮದ ಪಳ್ಳಕೆರೆ ಎಂಬಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕೂಡಲೇ ಈ ಬಗ್ಗೆ ಪರಿಶೀಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ