ಕೂಡಿಗೆ, ಜು. ೨೫: ರಾಜ್ಯ ಸರ್ಕಾ ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕುಶಾಲನಗರ ತಾಲೂಕು ಮಟ್ಟದ ಸಭೆಯು ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮಾಹಿತಿಯನ್ನು ಸಭೆಗೆ ಒದಗಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನಾ ಫಲಾನುಭವಿಗಳನ್ನು ಎರಡನೇ ದರ್ಜೆಯ ಪ್ರಜೆಗಳು ಎಂಬ ರೀತಿಯಲ್ಲಿ ನೋಡಬೇಡಿ. ಸರಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ದೊರಕಿಸಲು ಮುಂದಾಗಬೇಕೆAದು ಸಭೆಯಲ್ಲಿ ಅಧಿಕಾರಿಗಳಿಗೆ ಶಶಿಧರ್ ಸೂಚನೆ ನೀಡಿದರು.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಯುವ ನಿಧಿಯ ಸೌಲಭ್ಯಗಳ ಬಗ್ಗೆ ಮತ್ತು ನೋಂದಣಿಯಾದ ಫಲಾನುಭವಿಗಳ ಮಾಹಿತಿಯನ್ನು ಸಭೆಗೆ ಒದಗಿಸಿದರು.

ಗೃಹಲಕ್ಷಿö್ಮ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಗಳಿಗೆ ಸಂಬAಧಿಸಿದAತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿ ವರ್ಗದವರು, ಕುಶಾಲನಗರ ತಾಲೂಕು ಮಟ್ಟದ ಅಂಕಿ ಅಂಶಗಳು ಮತ್ತು ಎಷ್ಟು ಮಂದಿಗೆ ಯೋಜನಾ ಸವಲತ್ತುಗಳು ದೊರೆÀಯುತ್ತಿವೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಸಭೆಗೆ ಒದಗಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಮುಂದಿನ ದಿನಗಳಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕೆAದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಭೀಮ್ಮಯ್ಯ, ಕಾರ್ಯ ನಿರ್ವಹಣಾಧಿಕಾರಿ ವೀರಣ್ಣ, ಜಿಲ್ಲಾ ಸಮಿತಿಯ ಸದಸ್ಯ ಅಣ್ಣಯ್ಯ, ತಾಲೂಕು ಸಮಿತಿಯ ಸದಸ್ಯರಾದ ಅಬ್ದುಲ್ ರಜಾಕ್, ಶ್ರೀನಿವಾಸ್, ಕಿಶೋರ್, ಅದಂ, ರೋಶನ್, ಮಲ್ಲಿಕಾರ್ಜುನ, ಶ್ರೀನಿವಾಸ್, ಕೃಷ್ಣೇಗೌಡ, ರಫೀಕ್ ಖಾನ್, ರಾಜಶೇಖರ್, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ, ಮಡಿಕೇರಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ವ್ಯವಸ್ಥಾಪಕ ಎಂ.ಎA. ಮೆಹಬೂಬ್ ಆಲಿ ಸೇರಿದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು ಕಾರ್ಯನಿರ್ವಹಣಾಧಿಕಾರಿ ವೀರಣ್ಣ ಸ್ವಾಗತಿಸಿ, ವಂದಿಸಿದರು.