ಕೂಡಿಗೆ, ಜು. ೨೫: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಪತ್ತು ನಿರ್ವಹಣಾ ಸಮಿತಿ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ ಡೆಂಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸುವ ಬಗ್ಗೆ ಗ್ರಾಮ ವ್ಯಾಪ್ತಿಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಬಸವರಾಜ್, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ, ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಸ್ಥಳೀಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.