ಕುಶಾಲನಗರ, ಜು. ೨೭ : ಕುಶಾಲನಗರದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿ ಎಸಿ ಕಚೇರಿಯ ನೌಕರ ಅರುಣ್ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಕಳೆದ ನಾಲ್ಕು ದಿನಗಳಿಂದ ಶೋಧ ಕಾರ್ಯಾಚರಣೆ ತಂಡ ನದಿಯಲ್ಲಿ ಹುಡುಕಾಟ ನಡೆಸಿದ್ದು, ದೇಹ ಶನಿವಾರ ಸಂಜೆ ತನಕ ಪತ್ತೆಯಾಗಿಲ್ಲ. ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ಅಪಾಯದ ಮಟ್ಟ ಮೀರಿ ಶೋಧ ಕಾರ್ಯಕ್ಕೆ ಕೂಡ ತೊಡಕುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ತಿಳಿಸಿದ್ದಾರೆ.