ಮಡಿಕೇರಿ, ಜು. ೨೭: ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿ ಉತ್ತಮವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಜಲಾಶಯಗಳು, ಜಲಪಾತಗಳು, ಹಳ್ಳ ಕೊಳ್ಳ, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಇದರಿಂದ ಅಂತರ್ಜಲವು ಸಹ ಹೆಚ್ಚಾಗಿದೆ. ಹೀಗಾಗಿ ಯಾವುದೇ ರೀತಿ ಹಾನಿ ಉಂಟಾಗದAತೆ ಎಚ್ಚರ ವಹಿಸಬೇಕು ಎಂದರು.

೨೦೧೮, ೨೦೧೯, ೨೦೨೦ ರಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಹಾಗಾಗಿ ಮತ್ತಷ್ಟು ಮುನ್ನೆಚ್ಚರ ವಹಿಸಬೇಕು, ಜನ-ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ರಸ್ತೆಗಳು, ಸೆಸ್ಕ್ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳು, ಸರ್ಕಾರಿ ಶಾಲಾ-ಕಾಲೇಜು ಕಟ್ಟಡಗಳು, ಸರ್ಕಾರಿ ಕಚೇರಿಗಳು, ಮನೆ ಹಾಗೂ ಬೆಳೆ ಹಾನಿ ಹೀಗೆ ವಿವಿಧ ರೀತಿಯ ಹಾನಿಯಾಗಿದ್ದು, ಇದನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವ ಕಾರ್ಯ ಆಗಬೇಕು ಎಂದು ನಿರ್ದೇಶನ ನೀಡಿದರು.

ಈಗಾಗಲೇ ಹೆಚ್ಚಿನ ಮಳೆಯಾಗಿ ಶ್ರೀಮಂಗಲ-ಕುಟ್ಟ ರಸ್ತೆ, ಶಾಂತಳ್ಳಿ ರಸ್ತೆ ಹೀಗೆ ಹಲವು ರಸ್ತೆಗಳು ಹಾನಿಯಾಗಿದ್ದು, ಈ ಸಂಬAಧ ಮರಳು, ಜಲ್ಲಿಯನ್ನು ತುಂಬಿ ಸರಿಪಡಿಸುವ ಕಾರ್ಯವಾಗಬೇಕು. ಬ್ಯಾರಿಕೇಡ್ ಅಳವಡಿಸಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಗಮನಹರಿಸಬೇಕು ಎಂದು ಸೂಚಿಸಿದರು.

ಸಾರಿಗೆ ಸಂಪರ್ಕದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾದಲ್ಲಿ, ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತಂದು ಪರ್ಯಾಯ ಸಾರಿಗೆ ಸಂಪರ್ಕ ಕಲ್ಪಿಸಬೇಕು. ಯಾರಿಗೂ ತೊಂದರೆಯಾಗದAತೆ ಗಮನಹರಿಸುವುದು ಅತೀ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಹೆಚ್ಚಿನ ಗಾಳಿ ಮಳೆಯಿಂದ ಮನೆ ಹಾನಿಯಾದಲ್ಲಿ ಅಥವಾ ಇತರೆ ಸಮಸ್ಯೆಗಳು ಉಂಟಾದಲ್ಲಿ ಅಂತಹ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ತಹಶೀಲ್ದಾರರು, ತಾ.ಪಂ. ಇಒಗಳು, ಅರಣ್ಯ, ಸೆಸ್ಕ್, ಅಗ್ನಿಶಾಮಕ ದಳ, ಹೀಗೆ ಹಲವು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯತೆಯಿಂದ ಮುಂದಿನ ದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸಬೇಕು ಎಂದರು.

ಮನೆ ಹಾನಿಗೆ ಸಂಬAಧಿಸಿ ದಂತೆ ಎನ್‌ಡಿಆರ್‌ಎಫ್ ಮಾರ್ಗ ಸೂಚಿಯಂತೆ ೨೪ ಗಂಟೆಯೊಳಗೆ ಪರಿಹಾರ ವಿತರಿಸಬೇಕು. ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಪ್ರಾಕೃತಿಕ ವಿಕೋಪ ನಿರ್ವಹಿಸಬೇಕು.

ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧಿಸಿದAತೆ ಈಗಾಗಲೇ ಹೋಬಳಿ ಮಟ್ಟದಲ್ಲಿ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ವಿವಿಧ ರೀತಿಯ ಹಾನಿ ಮತ್ತಿತರ ಸ್ಥಿತಿಗತಿ ಬಗ್ಗೆ ಪ್ರತಿನಿತ್ಯ ವರದಿ ನೀಡಬೇಕು. ತುರ್ತು ಕಾರ್ಯವಿದ್ದಲ್ಲಿ ನೇರವಾಗಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಮಾತನಾಡಿ, ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಅರಣ್ಯ, ಅಗ್ನಿಶಾಮಕ ಹೀಗೆ ಪ್ರತಿ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಉತ್ತಮವಾಗಿ ಸ್ಪಂದನ ಇದೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳು, ನಗರ, ಪಟ್ಟಣ ಎಲ್ಲೆಡೆ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಹೆಚ್ಚಿನ ಅರಿವು ಮೂಡಿಸಬೇಕು. ಡೆಂಗ್ಯೂ ನಿಯಂತ್ರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಜಿಲ್ಲೆಯಲ್ಲಿ ೧೪ ಕ್ರಿಯಾಶೀಲ ಪ್ರಕರಣಗಳು ಇವೆ. ಡೆಂಗ್ಯೂ ನಿಯಂತ್ರಣಕ್ಕೆ ವಾರಕ್ಕೊಮ್ಮೆ ಲಾರ್ವ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.

ಪೌರಾಡಳಿತ ಇಲಾಖೆಯ ಎಇಇ ಹೇಮಂತ್ ಕುಮಾರ್ ಅವರು ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಗೆ ಹೆಚ್ಚಿನ ಮನೆಗಳು ಹಾನಿಯಾಗುತ್ತಿದ್ದು, ಇಂತಹ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಜೊತೆಗೆ ಟಾರ್ಪಲ್ ವಿತರಣೆ ಮಾಡಲಾಗುತ್ತಿದೆ ಎಂದರು.

ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಪಂಚಾಯತ್ ರಾಜ್ ಇಂಜಿನಿಯರ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ನವೀನ್ ಕುಮಾರ್, ರಾಮಚಂದ್ರ ಹಾಗೆಯೇ ತಾ.ಪಂ.ಇಒ ಗಳಾದ ಶೇಖರ್, ಅಪ್ಪಣ್ಣ, ಇತರರು ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧಿಸಿದAತೆ ಮಾಹಿತಿ ನೀಡಿದರು.

ಜಿ.ಪಂ. ಸಿಇಓ ಆನಂದ ಪ್ರಕಾಶ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಬಸಪ್ಪ, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಪೌರಾಯುಕ್ತ ವಿಜಯ್, ಇತರರು ಹಲವು ಮಾಹಿತಿ ನೀಡಿದರು.