ಮಡಿಕೇರಿ, ಜು. ೨೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರ್ನಾಡು ವಲಯದ ಮೂರ್ನಾಡು ಮತ್ತು ವಾಟೆಕಾಡು ಮಾತೃಶ್ರೀ ಜ್ಞಾನವಿಕಾಸ ಕೇಂದ್ರ ಸದಸ್ಯರಿಗೆ ವಿಷನ್ ಸ್ಟಿçಂಗ್ ಸಂಸ್ಥೆ ಸಹಯೋಗದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಜನೆಯ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ ವಹಿಸಿದ್ದರು. ಉದ್ಘಾಟನೆಯನ್ನು ತಾಲೂಕು ಯೋಜನಾಧಿಕಾರಿ ದಿನೇಶ್ ಬಿ. ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿತ್ಯ ನಿರಂತರವಾಗಿ ಇತರ ಸಂಘ-ಸAಸ್ಥೆಗಳ ಸಹಯೋಗದಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಬರುತ್ತಿದೆ. ಇದರ ಹೆಚ್ಚಿನ ಪ್ರಯೋಜನವನ್ನು ಎಲ್ಲಾ ಸದಸ್ಯರು ಪಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ ವಿಷನ್ ಸ್ಟಿçಂಗ್ ಸಂಸ್ಥೆಯ ಜಲೀಲ್ ಮಾತನಾಡಿ, ಕಣ್ಣು ಮನುಷ್ಯನ ಪಂಚೇAದ್ರಿಯಗಳಲ್ಲಿ ಅತ್ಯಂತ ಪ್ರಮುಖ ಅಂಗವಾಗಿದೆ ಎಂದರು. ಕಣ್ಣಿಗೆ ಬರುವಂತಹ ಸಮಸ್ಯೆಗಳು ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಜಯ್ ಕುಮಾರ್ ಅವರು ಪ್ರಸ್ತುತ ಮಳೆಗಾಲದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕಾಯಿಲೆ ಡೆಂಗ್ಯೂ ಬಗ್ಗೆ ತಿಳಿಸುತ್ತಾ ಅತ್ಯಂತ ಜಾಗರೂಕರಾಗಿ ಈ ಕಾಯಿಲೆಯ ಲಕ್ಷಣಗಳು ಕಂಡುಬAದಾಗ ಕೂಡಲೇ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ನಡೆಸುವುದು ಅತ್ಯಂತ ಸೂಕ್ತವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ೧೨೫ ಸದಸ್ಯರು ಪಾಲ್ಗೊಂಡು ಎಪ್ಪತ್ತು ಮಂದಿ ಉಚಿತ ಕನ್ನಡಕಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ಮೂರ್ನಾಡು ಸೇವಾಪ್ರತಿನಿಧಿ ದಿವ್ಯಾ ಸ್ವಾಗತಿಸಿ, ವಾಟೆಕಾಡು ಸೇವಾಪ್ರತಿನಿಧಿ ಕಾವೇರಿ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.