ಕುಶಾಲನಗರ, ಜು. ೨೭: ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ೨೦೨೪ರ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಒದಗಿಸುವ ಹಿನ್ನೆಲೆಯಲ್ಲಿ ತಾ. ೨೮ರಿಂದ (ಇಂದಿನಿAದ) ಅಣೆಕಟ್ಟೆಯಿಂದ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳ ಮೂಲಕ ನೀರು ಹರಿಸಲಾಗುವುದು.
ಈ ಸಂಬAಧ ಇತ್ತೀಚೆಗೆ ಬೆಂಗಳೂರಿನಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಹಾರಂಗಿ ಯೋಜನಾ ವೃತ್ತದ ಸಲಹಾ ಸಮಿತಿಯ ಸಭೆ ನಡೆದಿದ್ದು ಈ ನಿರ್ಧಾರ ಕೈಗೊಳ್ಳಲಾಗಿದೆ.