ಬೆಂಗಳೂರು, ಜು. ೨೭ : ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ರಸ್ತೆ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಇನ್ನು ಮುಂದೆ ಯಾವುದೇ ಚಾಲಕರು ೧೩೦ ಕಿಮೀ ವೇಗದಲ್ಲಿ ವಾಹನ ಓಡಿಸಿದಲ್ಲಿ ಅಂತವರ ವಿರುದ್ಧ ಆಗಸ್ಟ್ ೧ ರಿಂದ ಎಫ್‌ಐಆರ್ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಅಲೋಕ್ ಕುಮಾರ್ ಈ ಸಂಬAಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ ೧೩೦ ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯವಾಗಿ ಶೇ.೯೦ರಷ್ಟು ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತದೆ. ಗುರುವಾರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ, ೧೫೫ ವಾಹನಗಳು ಗಂಟೆಗೆ ೧೩೦ ಕಿಮೀ ವೇಗದಲ್ಲಿ ಚಲಿಸುತ್ತಿದ್ದವು. ಆದ್ದರಿಂದ ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ದಾಖಲಿಸಲಾಗುತ್ತದೆ ಎಂದು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಓವರ್ ಸ್ಪೀಡಿಂಗ್ ಅನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್‌ನಲ್ಲಿ ಅಳೆಯಲಾಗುತ್ತದೆ. ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ. ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದರೂ ಕೇಸ್ ಬುಕ್ ಆಗುತ್ತದೆ. ರಾಷ್ಟಿçÃಯ ಹೆದ್ದಾರಿಗಳಲ್ಲಿ ಗಂಟೆಗೆ ೧೦೫ ಕಿ.ಮೀ ವೇಗದಲ್ಲಿ ಸಂಚರಿಸುವವರಿಗೆ ದಂಡ ವಿಧಿಸಲಾಗುತ್ತದೆ. ಎಫ್‌ಐಆರ್‌ಗಳ ನೋಂದಣಿಗೆ ೧೩೦ ಕಿಮೀ ಮಿತಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.