ಮಡಿಕೇರಿ, ಜು. ೨೮: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಪದವಿ, ಡಿಪ್ಲೋಮ, ಜೆಒಸಿ, ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯ ಮಾದರಿಗಳನ್ನು, ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಅವರಿಂದ ಪಡೆದು ಸೆಪ್ಟೆಂಬರ್ ೩೦ ರೊಳಗೆ ಸಲ್ಲಿಸಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯ ತಿಳಿಸಿದ್ದಾರೆ.