ಕೂಡಿಗೆ, ಜು. ೨೮: ಜಿಲ್ಲೆಯ ಬಸವನಹಳ್ಳಿ ಮತ್ತು ತಿತಿಮತಿ ಲ್ಯಾಂಪ್ ಸಹಕಾರ ಸಂಘದ ವತಿಯಿಂದ ಗಿರಿಜನ ಲ್ಯಾಂಪ್ ಸಹಕಾರ ಸಂಘಗಳ ಅಭಿವೃದ್ಧಿಗೆ ಪೂರಕವಾಗಲು ಸಹಕಾರ ಇಲಾಖೆಯ ವತಿಯಿಂದ ಹೆಚ್ಚುವರಿಯಾಗಿ ಅನುದಾನವನ್ನು ಬಿಡುಗಡೆ ಮಾಡುವಂತೆ ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಗಿರಿಜನ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್, ತಿತಿಮತಿ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷ ಪಿ.ಕೆ. ಮಣಿ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಎಸ್.ಎನ್. ಅನಂತ, ಕೆ.ಎಸ್. ಶಿವಕುಮಾರ್ ಹಾಜರಿದ್ದರು.