ಮಡಿಕೇರಿ, ಜು. ೨೮: ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ (ಜಿಲ್ಲಾಸ್ಪತ್ರೆ) ಹೊರ ರೋಗಿಗಳ ವಿಭಾಗದ ಆರೋಗ್ಯ ಸೇವೆಗಳನ್ನು ಇಂದು ಆಸ್ಪತ್ರೆಯ ಹಳೆಯ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಪೂಜಾ ವಿಧಿವಿಧಾನಗಳ ಮೂಲಕ ಹೊಸ ಕಟ್ಟಡದಲ್ಲಿ ಹೊರ ರೋಗಿಗಳ ವಿಭಾಗದ ಆರೋಗ್ಯ ಸೇವೆಗಳಿಗೆ ಚಾಲನೆ ನೀಡಲಾಯಿತು. ಹೊರ ರೋಗಿಗಳಿಗೆ ಸಂಬAಧಿಸಿದAತೆ ನೂತನ ಕಟ್ಟಡದಲ್ಲಿ ಮೂಳೆ ಚಿಕಿತ್ಸೆ, ಚರ್ಮರೋಗ, ಕಿವಿ ಗಂಟಲು ಮೂಗು, ಕಣ್ಣಿನ ಚಿಕಿತ್ಸೆ, ಮಾನಸಿಕ ರೋಗ, ಶ್ವಾಸಕೋಶ, ಮೆದುಳು ಸೇರಿದಂತೆ ಮತ್ತಿತರ ಆರೋಗ್ಯ ಸೇವೆಗಳು ಲಭಿಸಲಿವೆ. ಸಣ್ಣ ಪ್ರಮಾಣದ ಶಸ್ತç ಚಿಕಿತ್ಸಾ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ. ಔಷಧಿ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ ೫ ಲಕ್ಷ ರೂ.ವರೆಗಿನ ಉಚಿತ ಆರೋಗ್ಯ ಚಿಕಿತ್ಸೆಗೆ ಸಂಬAಧಿಸಿದ ಸೇವೆಗಳು ಕೂಡ ಇಲ್ಲಿ ಲಭ್ಯವಿರುತ್ತದೆ. ಚುಚ್ಚುಮದ್ದು ಕೇಂದ್ರ ಕೂಡ ಇಲ್ಲಿಯೇ ಕಾರ್ಯ ನಿರ್ವಹಿಸಲಿದೆ.
‘ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ’
ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್‌ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಪಾಲ್ಗೊಂಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂತರ್‌ಗೌಡ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ನೂತನ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿ ಹೊರ ರೋಗಿಗಳ ವಿಭಾಗದ ಆರೋಗ್ಯ ಸೇವೆಗಳನ್ನು ನೂತನ ಕಟ್ಟಡದಲ್ಲಿ ಪ್ರಾರಂಭಿಸುವAತೆ ಸಂಬAಧಿಸಿದವರಿಗೆ ನಿರ್ದೇಶನ ನೀಡಿದ್ದರು. ಅದರಂತೆ ಇಂದಿನಿAದ ಹೊರ ರೋಗಿಗಳ ವಿಭಾಗದ ಆರೋಗ್ಯ ಸೇವೆಗಳನ್ನು ನೂತನ ಕಟ್ಟಡದಲ್ಲಿ ಆರಂಭಿಸಲಾಗಿದೆ. ನೂತನ ಆಸ್ಪತ್ರೆ ೩೦೦ ಬೆಡ್‌ಗಳ ಸಾಮರ್ಥ್ಯ ಹೊಂದಿದ್ದು, ಇಲ್ಲಿನ ಉಳಿದಿರುವ ಕಾಮಗಾರಿಗಳಿಗೆ ರೂ. ೬೦ ಕೋಟಿ ಅನುದಾನ ಹಣ ಬಿಡುಗಡೆಗೂ ಈಗಾಗಲೇ ಸಚಿವ ಶರಣ ಪ್ರಕಾಶ ಪಾಟೀಲ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಅಲ್ಲದೆ ಕಾರ್ಡಿಯಾಲಜಿ ಘಟಕಕ್ಕೂ ನೂತನ ಆಸ್ಪತ್ರೆಯಲ್ಲಿ ವ್ಯವಸ್ಥೆ ಇದ್ದು, ಈ ವರ್ಷದೊಳಗಾಗಿ ಅದನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಹೊಸ ಆಸ್ಪತ್ರೆಯಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಂತರ್‌ಗೌಡ ನುಡಿದರು.
ಅಲ್ಲಿನ ‘ಡಿ’ ದರ್ಜೆ ನೌಕರರು, ಶೂಶ್ರೂಷಕರು, ಸಿಬ್ಬಂದಿಗಳು, ವೈದ್ಯರ ಜೊತೆ ಸಮಲೋಚಿಸಿದ ಡಾ. ಮಂತರ್‌ಗೌಡ ಮತ್ತು ಎಂ.ಪಿ. ಸುಜಾ ಕುಶಾಲಪ್ಪ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಒಳ್ಳೆಯ ಹೆಸರು ತರಬೇಕು, ಸ್ವಚ್ಚತೆಗೆ ಹೆಚ್ಚು ಒತ್ತು ಕೊಡಬೇಕು, ರೋಗಿಗಳನ್ನು ಕುಟುಂಬದವರAತೆ ಕಾಣಬೇಕು ಎಂದು ಸಲಹೆ ನೀಡಿದರು.
ಬಳಿಕ ಶಾಸಕ ಡಾ. ಮಂತರ್‌ಗೌಡ ಅವರು ಸ್ಕಾö್ಯನಿಂಗ್ ಕೇಂದ್ರಕ್ಕೆ ಭೇಟಿ ೩ಆರನೇ ಪುಟಕ್ಕೆ (ಮೊದಲ ಪುಟದಿಂದ) ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಸ್ವತಃ ವೈದ್ಯರಾದ ಡಾ. ಮಂತರ್‌ಗೌಡ ಅವರು ಹೊರ ರೋಗಿಗಳ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು.
ಶಾಸಕ ಡಾ. ಮಂತರ್‌ಗೌಡ, ಎಂಎಲ್‌ಸಿ ಸುಜಾ ಕುಶಾಲಪ್ಪ ಅವರುಗಳನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ. ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ. ಸತೀಶ್, ಡಾ. ರೂಪೇಶ್ ಗೋಪಾಲ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಚಂದ್ರಶೇಖರ್, ಮಿನಾಜ್ ಪ್ರವೀಣ್, ಪ್ರಮುಖರಾದ ಚುಮ್ಮಿ ದೇವಯ್ಯ, ತೆನ್ನೀರ ಮೈನ, ಜಾನ್ಸನ್, ಜುಲೇಕಾಬಿ, ಲೀಲಾ ಶೇಷಮ್ಮ, ಸುರೇಶ್ ಇತರರು ಇದ್ದರು.