ಕುಶಾಲನಗರ, ಜು. ೨೮: ಕಾವೇರಿ ನದಿಗೆ ಹಾರಿದ ಮಡಿಕೇರಿ ಉಪ ವಿಭಾಗಾಧಿಕಾರಿ ಕಚೇರಿಯ ನೌಕರ ಅರುಣ್ ಇನ್ನೂ ಪತ್ತೆಯಾಗಿಲ್ಲ.

ಕಳೆದ ಐದು ದಿನಗಳಿಂದ ಎನ್‌ಡಿಆರ್‌ಎಫ್ ಸೇರಿದಂತೆ ೫ ತಂಡಗಳು ಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಉದ್ದಕ್ಕೂ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದು ಇದುವರೆಗೂ ಅರುಣ್ ಸುಳಿವು ಪತ್ತೆಯಾಗಿಲ್ಲ ಎಂದು ಕುಶಾಲನಗರ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಲ್ಪೆಯ ನುರಿತ ಈಜುಗಾರ ಈಶ್ವರ ಮಲ್ಪೆ ಅವರು ಕೂಡ ಆಗಮಿಸಿ ಒಂದು ದಿನದ ಕಾರ್ಯಾಚರಣೆ ನಡೆಸಿದ್ದಾರೆ. ಕಾವೇರಿ ನದಿಯಲ್ಲಿ ಉಕ್ಕಿ ಹರಿಯುವ ನೀರಿನ ನಡುವೆ ಶೋಧಕಾರ್ಯಕ್ಕೆ ತೊಡಕು ಉಂಟಾದ ಹಿನ್ನೆಲೆಯಲ್ಲಿ ಅವರು ಹಿಂತಿರುಗಿರುವುದಾಗಿ ತಿಳಿಸಿದ್ದಾರೆ.