ಮಡಿಕೇರಿ, ಜು. ೨೮: ಮಾಜಿ ಸಂಸದ, ಕೊಡಗು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಕೊಡಗಿನ ಅಳಿಯ ಆಗಿರುವ ಸಿ.ಹೆಚ್. ವಿಜಯಶಂಕರ್ ಅವರು ಮೇಘಾಲಯದ ರಾಜ್ಯಪಾಲರಾಗಿ ನಿಯುಕ್ತಿ ಗೊಂಡಿದ್ದಾರೆ. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಮೊದಲು ಹುಣಸೂರು ಕ್ಷೇತ್ರದಿಂದ ಬಿಜೆಪಿಯಿಂದ ಶಾಸಕರಾಗಿ ೩ಆರನೇ ಪುಟಕ್ಕೆ

(ಮೊದಲ ಪುಟದಿಂದ) ಆಯ್ಕೆಗೊಂಡ ವಿಜಯ ಶಂಕರ್, ನಂತರ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ೨೦೦೯ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅರಣ್ಯ ಸಚಿವರಾಗಿ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ೨೦೧೯ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಕೊಡಗು-ಮೈಸೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಭಾವಗೊಂಡಿದ್ದರು. ನಂತರ ಬಿಜೆಪಿಗೆ ಮರುಸೇರ್ಪಡೆಗೊಂಡ ವಿಜಯ್ ಶಂಕರ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಐದು ಜಿಲ್ಲೆಗಳ ಪಕ್ಷದ ಉಸ್ತುವಾರಿ ಸ್ಥಾನ ನಿಭಾಯಿಸಿದ್ದರು. ಎರಡು ಬಾರಿ ಸಂಸದರಾಗಿದ್ದ ವಿಜಯ್ ಶಂಕರ್ ಅವರು ಇದೀಗ ಮೇಘಾಲಯ ರಾಜ್ಯಪಾಲರಾಗಿ ಅತ್ಯುನ್ನತ ಸ್ಥಾನಕ್ಕೆ ಏರಿದ್ದಾರೆ. ಗೋಣಿಕೊಪ್ಪ ಸಮೀಪದ ದೇವರಪುರ ಗ್ರಾಮದ ದೇವರಾಜು, ಗಾಯತ್ರಿ ದಂಪತಿಯ ಪುತ್ರಿ ಬಬಿತಾ ಅವರನ್ನು ವಿವಾಹವಾಗಿರುವ ವಿಜಯ್ ಶಂಕರ್ ಕೊಡಗಿನ ಅಳಿಯ.