ಮಡಿಕೇರಿ, ಜು. ೨೮: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೪-೨೫ನೇ ಸಾಲಿನಲ್ಲಿ ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್ ಆನ್‌ಲೈನ್ ವೇದಿಕೆ ತಂತ್ರಾAಶದಡಿ ಆಳವಡಿಸಲಾಗಿರುತ್ತದೆ. ಆದ್ದರಿಂದ ಈ ಕೆಳಕಂಡ ಯೋಜನೆಗಳನ್ನು ಆನ್‌ಲೈನ್ ಮೂಲಕ ಅನುಷ್ಠಾನಗೊಳಿಸುವ ಉದ್ದೇಶದಿಂದ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ೧೩ ಫಲಾನುಭವಿ ಆಧಾರಿತ ಯೋಜನೆಗಳಿಗೆ ೨೦೨೪-೨೫ನೇ ಸಾಲಿಗೆ ವಿಶೇಷಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿesಏಚಿಟಿಟಿಚಿಜಚಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಯೋಜನೆಗಳ ವಿವರ: ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ನಿರುದ್ಯೋಗ ಭತ್ಯೆ, ದೈಹಿಕ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಆಧಾರ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಮರಣ ಪರಿಹಾರ ನಿಧಿ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆ, ಸಾಧನೆ ಯೋಜನೆ, ಸಾಧನ ಸಲಕರಣೆ ಯೋಜನೆ, ಪ್ರತಿಭೆ ಯೋಜನೆ.

ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್. ಮೊ. ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ. ೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ. ೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂ: ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.