ಒಲಂಪಿಕ್ಸ್ ಹಾಕಿ - ಡ್ರಾನಲ್ಲಿ ಭಾರತಕ್ಕೆ ಗೆಲುವು
ಪ್ಯಾರಿಸ್, ಜು. ೨೯: ಪಂದ್ಯ ಮುಕ್ತಾಯಕ್ಕೆ ಇನ್ನೊಂದು ನಿಮಿಷ ಬಾಕಿ ಇರುವಾಗ ನಾಯಕ ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಮನಮೋಹಕ ಗೋಲ್ ನೆರವಿನಿಂದ ಭಾರತದ ಒಲಿಂಪಿಕ್ಸ್ ಹಾಕಿ ತಂಡ ಸೋಲಿನ ದವಡೆಯಿಂದ ಪಾರಾಯಿತು. ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 'ಬಿ' ಗುಂಪಿನಲ್ಲಿ ಸ್ಪರ್ಧಿಸುತ್ತಿರುವ ಟೀಮ್ ಇಂಡಿಯಾ, ಸೋಮವಾರ ತನ್ನ ಎರಡನೇ ಲೀಗ್ ಪಂದ್ಯದಲ್ಲಿ ಅರ್ಜೆಂಟೀನಾ ಎದುರು ೧-೧ ಅಂತರದ ರೋಚಕ ಡ್ರಾ ಸಾಧಿಸಿತು. ಈ ಫಲಿತಾಂಶದೊAದಿಗೆ ಭಾರತದ ಹಾಕಿ ತಂಡ ಅಂಕಪಟ್ಟಿಯಲ್ಲಿ ೩ನೇ ಸ್ಥಾನ ಪಡೆದುಕೊಂಡಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಅರ್ಜೆಂಟೀನಾ ತಂಡದ ಪರ ಲೂಕಾಸ್ ಮಾರ್ಟಿನಝ್ ಪಂದ್ಯದ ೨೨ನೇ ನಿಮಿಷದಲ್ಲಿ ಫೀಲ್ಡ್ ಗೋಲ್ ಬಾರಿಸಿ ತಂಡಕ್ಕೆ ಮುನ್ನಡೆ ಒದಗಿಸಿಕೊಟ್ಟರು. ಬಳಿಕ ಪಂದ್ಯದ ಬಹುಪಾಲು ಸಮಯ ಅತ್ಯುತ್ತಮ ಡಿಫೆನ್ಸ್ ಮೂಲಕ ಅರ್ಜೆಂಟೀನಾ ತಂಡ ೧-೦ ಅಂತರದ ಮೇಲುಗೈ ಪಡೆದುಕೊಂಡಿತ್ತು. ಇನ್ನೇನು ಅರ್ಜೆಂಟೀನಾ ಪಂದ್ಯವನ್ನು ೧-೦ ಅಂತರದಲ್ಲಿ ಗೆದ್ದುಕೊಳ್ಳುತ್ತದೆ ಎನ್ನುವಷ್ಟರಲ್ಲಿ ಟೀಮ್ ಇಂಡಿಯಾ ನಾಯಕ ಹರ್ಮನ್‌ಪ್ರೀತ್ ಸಿಂಗ್, ಸಿಕ್ಕ ಪೆನಾಲ್ಟಿ ಕಾರ್ನರ್ ಅನ್ನು ಅದ್ಭುತ ಗೋಲ್ ಆಗಿ ಪರಿವರ್ತಿಸಿ ಆಘಾತ ತಪ್ಪುವಂತೆ ಮಾಡಿದರು.
ಕೆ.ಆರ್.ಎಸ್. ಜಲಾಶಯಕ್ಕೆ ಬಾಗಿನ ಅರ್ಪಣೆ
ಮಂಡ್ಯ, ಜು. ೨೯: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಸಾಥ್ ನೀಡಿದರು. ಭಾನುಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ ೨೦೧೩ ಹಾಗೂ ೨೦೧೪ ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಾಗಲೂ ೨೦೨೩ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.
ಕೇಂದ್ರದಿAದ ಕರ್ನಾಟಕಕ್ಕೆ ಅನ್ಯಾಯ - ಸಿದ್ದರಾಮಯ್ಯ
ಮೈಸೂರು, ಜು. ೨೯: ಕೇಂದ್ರ ಬಜೆಟ್‌ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಮಂಡ್ಯಕ್ಕೆ ಬಜೆಟ್‌ನಲ್ಲಿ ಏನು ಕೊಟ್ಟಿದ್ದಾರೆ? ಮಂಡ್ಯಕ್ಕೆ ಏನೂ ಕೊಟ್ಟಿಲ್ಲ. ಕೈಗಾರಿಕೆಯನ್ನಾದರೂ ಕೊಟ್ಟರಾ? ಇಲ್ಲ ಎಂದು ಹೇಳಿದರು. ರಾಯಚೂರಿಗೆ ಏಮ್ಸ್ ಆಸ್ಪತ್ರೆ ಕೇಳಿದ್ದೆವು ಅದನ್ನೂ ಕೊಟ್ಟಿಲ್ಲ. ಕೇವಲ ಆಂಧ್ರಪ್ರದೇಶ, ಬಿಹಾರಕ್ಕೆ ಮಾತ್ರ ಕೊಡುಗೆ ನೀಡಿದ್ದಾರೆ ಎಂದು ಆರೋಪಿಸಿದರು. ಮುಡಾ ಹಗರಣದಲ್ಲಿ ತನ್ನ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪ ಕುರಿತು ಮಾತನಾಡಿ, ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ ಎಂದು ತಿರುಗೇಟು ನೀಡಿದರು.
ಕೇಂದ್ರ ಬಜೆಟ್ ವಿರುದ್ಧ ರಾಹುಲ್ ಟೀಕೆ
ನವದೆಹಲಿ, ಜು. ೨೯: ಕೇಂದ್ರ ಬಜೆಟನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ಸಂಸತ್‌ನಲ್ಲಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು. ಬಜೆಟ್ ತಯಾರಿಕೆಯ ತಂಡದಲ್ಲಿ ವೈವಿಧ್ಯತೆಯ ಕೊರತೆಯ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಒಳಗೊಳ್ಳುವಿಕೆಗೆ ಸಂಬAಧಿಸಿದAತೆ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ತಮ್ಮ ಆರೋಪಗಳನ್ನು ಸಮರ್ಥಿಸಿಕೊಳ್ಳುವುದಕ್ಕೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಪೂರ್ವದಲ್ಲಿ ನಡೆಯುವ ಸಾಂಪ್ರದಾಯಿಕ ಹಲ್ವಾ ಸಮಾರಂಭದ ಪೋಸ್ಟರನ್ನು ಪ್ರದರ್ಶಿಸಿದ್ದು, ಬಜೆಟ್ ತಯಾರಿಕೆಯ ತಂಡದಲ್ಲಿದ್ದ ೨೦ ಅಧಿಕಾರಿಗಳ ಪೈಕಿ ದಲಿತರು, ಒಬಿಸಿ, ಆದಿವಾಸಿಗಳ ಅನುಪಸ್ಥಿತಿಯನ್ನು ರಾಹುಲ್ ಗಾಂಧಿ ಉಲ್ಲೇಖಿಸಿದರು. ಈ ಫೋಟೋದಲ್ಲಿ ಬಜೆಟ್ ಹಲ್ವಾ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಒಬ್ಬ ಒಬಿಸಿ, ಬುಡಕಟ್ಟು ಅಥವಾ ದಲಿತ ಅಧಿಕಾರಿಯೂ ಕಾಣುತ್ತಿಲ್ಲ. ೨೦ ಅಧಿಕಾರಿಗಳು ದೇಶದ ಬಜೆಟ್‌ನ್ನು ತಯಾರಿಸಿದ್ದಾರೆ. ಹಿಂದೂಸ್ಥಾನದ ಹಲ್ವಾ ವಿತರಣೆ ೨೦ ಜನರು ವಿತರಣೆ ಮಾಡುವ ಕೆಲಸವೆ? ಎಂದು ದೇಶದ ಬಹುಸಂಖ್ಯಾತ ಜನಸಂಖ್ಯೆಯನ್ನು ಬಜೆಟ್ ನಿಂದ ಹೊರಗಿಡಲಾಗಿದೆ ಎಂಬುದನ್ನು ಸೂಚ್ಯವಾಗಿ ಹೇಳಲು ಯತ್ನಿಸಿದರು. ಸಂಸತ್ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರಬೇಕಾದರೆ, ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗ ತೊಡಗಿದೆ.
ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ
ಬೆAಗಳೂರು, ಜು. ೨೯: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾರಾಗಿರುವ ನಟ ದರ್ಶನ್ ಇದೀಗ ಮನೆಯೂಟ, ಹಾಸಿಗೆ ಮತ್ತು ಪುಸ್ತಕ ಪೂರೈಕೆಗೆ ಅನುಮತಿಸಲು ಜೈಲಾಧಿಕಾರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ದರ್ಶನ್ ಪರ ಹಾಜರಾಗಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ಹೈಕೋರ್ಟ್ ನಿರ್ದೇಶನದಂತೆ ಮನೆ ಊಟ ಪೂರೈಸಲು ಜೈಲು ಅಧಿಕಾರಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾಧೀನ ಮ್ಯಾಜಿಸ್ಟೆçÃಟ್ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಹೈಕೋರ್ಟ್ನಲ್ಲಿ ಅರ್ಜಿ ಹಿಂಪಡೆಯಲು ಮೆಮೊ ಸಲ್ಲಿಸಿದ್ದೇವೆ. ಹೊಸ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಈ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದು ಕೋರಿದರು. ಇದನ್ನು ಪುರಸ್ಕರಿಸಿದ ಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿದೆ.
ಒಲಂಪಿಕ್ಸ್ನಲ್ಲಿ ಪ್ರಣಯ್ ಶುಭಾರಂಭ
ಪ್ಯಾರಿಸ್, ಜು. ೨೯: ಪ್ಯಾರಿಸ್ ಒಲಂಪಿಕ್ಸ್ ೨೦೨೪ ಕ್ರೀಡಾಕೂಟದ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಹೆಚ್.ಎಸ್. ಪ್ರಣಯ್ ಶುಭಾರಂಭ ಮಾಡಿದ್ದಾರೆ. ಇಂದು ನಡೆದ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಣಯ್ ಜರ್ಮನಿಯ ಫ್ಯಾಬಿಯನ್