ಮಡಿಕೇರಿ, ಜು. ೨೯: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ ಮಡಿಕೇರಿ ಇವರ ಸಹಯೋಗದಲ್ಲಿ ವಿಶ್ವ ಮೆದುಳು ದಿನ ೨೦೨೪ “ಮೆದುಳು ಆರೋಗ್ಯ ಹಾಗು ತಡೆಗಟ್ಟುವಿಕೆ” ಘೋಷ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಾಮಾನ್ಯ ವೈದ್ಯ ಶಾಸ್ತç ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳು ಪ್ರಸ್ತುತ ಮಾನವನ ಆರೋಗ್ಯಕ್ಕೆ ಮೆದುಳಿನ ಆರೋಗ್ಯವು ಎಷ್ಟು ಪ್ರಮುಖವಾಗಿ ಬೇಕಾಗಿದೆ ಹಾಗೂ ಮೆದುಳನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಲು ಪ್ರತಿನಿತ್ಯ ಏನು ಮಾಡಬೇಕು ಎಂದು ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್ ಅವರು ಮಾತನಾಡಿ, ಭಾರತದಲ್ಲಿ ನರವೈಜ್ಞಾನಿಕ ಕಾಯಿಲೆಗಳ ಹೊರೆ ಹೆಚ್ಚುತ್ತಿದೆ. ಪಾರ್ಶ್ವವಾಯು, ಬುದ್ಧಿಮಾಂದ್ಯತೆಗಳು ರೋಗದ ಹೊರೆ ಮತ್ತು ಮರಣಕ್ಕೆ ಪ್ರಮುಖ ಕೊಡುಗೆಗಳಾಗಿವೆ. ಅಪಸ್ಮಾರ, ತಲೆನೋವು, ಸೋಂಕುಗಳು, ತಲೆಗೆ ಗಾಯಗಳು ಮತ್ತು ಇತರ ನರವೈಜ್ಞಾನಿಕ ಅಸ್ವಸ್ಥತೆ ಗಳು ಸಹ ಅಂಗವೈಕಲ್ಯಕ್ಕೆ ಕಾರಣ ವಾಗುತ್ತಿದ್ದು, ಇದರ ತುರ್ತು ಕ್ರಮದ ಅಗತ್ಯತೆಯನ್ನು ಗುರುತಿಸಿ ಕರ್ನಾಟಕ ಸರ್ಕಾರವು ಕರ್ನಾಟಕ ಬ್ರೆöÊನ್‌ಹೆಲ್ತ್ ಇನಿಶಿಯೇಟಿವ್ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯಾದ್ಯಂತ ಬ್ರೆöÊನ್‌ಹೆಲ್ತ್ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗಿರುವ ಬಗ್ಗೆ ತಿಳಿಸಿದರು.

ಕೆಎಬಿಹೆಚ್‌ಐ ಜಿಲ್ಲಾ ಸಂಯೋಜಕ ವಿಕ್ರಮ್ ಆರ್. ಅವರು ನರಸಂಬAಧಿ ರೋಗಗಳ ಬಗ್ಗೆ ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ರೂಪುರೇಷೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿದರು,

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಂಗ ರಚನಾ ಶಾಸ್ತç ವಿಭಾಗದಿಂದ ಮೆದುಳಿನ ಮಾದರಿಗಳನ್ನು ಆಸ್ಪತ್ರೆಯಲ್ಲಿ ಪ್ರದರ್ಶಿಸಿ ಅಗತ್ಯ ಮಾಹಿತಿಯನ್ನು ಡಾ. ರೋಶಿನಿಯವರು ನೀಡಿದರು.

ಕಾರ್ಯಕ್ರಮದಲ್ಲಿ ಸಾಮಾನ್ಯ ಮೆದುಳಿನ ಕಾಯಿಲೆಗಳ ಗುರುತಿಸುವಿಕೆ, ತಲೆ ನೋವು, ಮೂರ್ಛೆ ರೋಗ, ಪಾರ್ಶ್ವಾವಾಯು, ಮರೆವಿನ ಕಾಯಿಲೆಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಯಿತು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ಸೋಮಶೇಖರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ, ವೈದ್ಯಶಾಸ್ತç ವಿಭಾಗದ ಪ್ರಾದ್ಯಾಪಕ ಡಾ. ಲೋಕೇಶ್ ಎ.ಜೆ., ಸೇರಿದಂತೆ ವೈದ್ಯರು, ಬೋಧಕೇತರ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.