ಕುಶಾಲನಗರ, ಜು. ೨೯: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕ ಹಾಗೂ ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ತಾ. ೩೧ ರಂದು ಕುಶಾಲನಗರದ ಗಾಯಿತ್ರಿ ಕಲ್ಯಾಣ ಮಂಟಪದÀಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಮತ್ತು ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದ ಉದ್ಗಾಟನೆಯನ್ನು ಮಾಜಿ ಸಚಿವರಾದ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ. ಘಟಕದ ಅಧ್ಯಕ್ಷ ಹೆಚ್.ಎಂ. ರಘುಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕುಶಾಲನಗರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕುಶಾಲನಗರ ಪ್ರೆಸ್ಕ್ಲಬ್ ಕಾನೂನು ಸಲಹೆಗಾರರಾದ ಆರ್.ಕೆ. ನಾಗೇಂದ್ರ ಬಾಬು, ಉದ್ಯಮಿ ಬಿ.ಎಸ್. ಸದಾಶಿವ ಶೆಟ್ಟಿ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಜಿಲ್ಲಾ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಹೆಚ್.ಜೆ. ದಾಮೋದರ್, ರಕ್ಷಣಾ ವೇದಿಕೆಯ ದೀಪಾ ಪೂಜಾರಿ ಭಾಗವಹಿಸಲಿದ್ದಾರೆ.
ಪತ್ರಕರ್ತ ಎ.ಎನ್. ಸುಧಿಕುಮಾರ್, ಆಟೋ ಚಾಲಕಿ ಸುಜಾತ, ಆಶಾ ಕಾರ್ಯಕರ್ತೆ ರೀನಾ, ಉದ್ಯಮಿ ಬಿ.ಎಸ್. ಸದಾಶಿವ ಶೆಟ್ಟಿ, ರಂಗಭೂಮಿ ಕಲಾವಿದ ಭರಮಣ್ಣ ಬೆಟ್ಟಗೇರಿ, ಹೊಟೇಲ್ ಕಾರ್ಮಿಕರ ಸಂಘದ ಅಧ್ಯಕ್ಷ ಹೆಚ್.ಆರ್. ನಾಗೇಂದ್ರ, ಮೂಕಾಂಬಿಕಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ್, ಸಾಹಿತಿ ಹನುಮಂತ ವಿ ಸೋಮನಕಟ್ಟೀ, ಕರಾಟೆಪಟು ರಿಮೋನ್ ಪೊನ್ನಣ್ಣ, ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಕರವೇ ಉಪಾಧ್ಯಕ್ಷ ಬಿ.ಎ. ದಿನೇಶ್, ಕಂದಾಯ ಪರಿವೀಕ್ಷಣಾಧಿಕಾರಿ ಎಂ.ಹೆಚ್. ಪ್ರಶಾಂತ್, ಕಲಾವಿದ ರವಿ ಆರ್. ಶಾಸ್ತಿç, ದೈಹಿಕ ಶಿಕ್ಷಕ ಎಂ. ಸಂತೋಷ್ ಕುಮಾರ್, ಜೆಸಿಐ ಮಾಜಿ ಅಧ್ಯಕ್ಷ ರಜನಿಕಾಂತ್ ಕಾವೇರಿ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದು, ಮುಖ್ಯ ಭಾಷಣಕಾರರಾಗಿ ನಿವೃತ್ತ ಚಿತ್ರಕಲಾ ಶಿಕ್ಷಕರಾದ ಉ.ರಾ. ನಾಗೇಶ್ ಪಾಲ್ಗೊಳ್ಳಲಿದ್ದಾರೆ.