ಕೂಡಿಗೆ, ಜು. ೨೯: ಹಾರಂಗಿ ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಹಿನ್ನೀರಿನ ತಟದ ಕೆಲ ಪ್ರದೇಶಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೀರಾವರಿ ಇಲಾಖೆಯ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾರಂಗಿ ನೀರಾವರಿ ಇಲಾಖೆಯ ಹಿನ್ನೀರಿನ ವ್ಯಾಪ್ತಿಯ ಹಟ್ಟಿಹೊಳೆ, ಹಮ್ಮಿಯಾಲ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ, ಇಂಜಿನಿಯರ್ ಸಿದ್ದರಾಜ್, ಕಿರಣ್, ಚೆಸ್ಕಾಂ ಇಂಜಿನಿಯರ್ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.