ನಾಪೋಕ್ಲು, ಜು. ೨೯: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಗುಣವನ್ನು ರೂಢಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ನವರು ಹೇಳಿದರು.
ಸಮೀಪದ ಎಮ್ಮೆಮಾಡು ಪಂಚಾಯಿತಿಯಲ್ಲಿ ಮಳೆಹಾನಿ ಪ್ರದೇಶ ವೀಕ್ಷಣೆ ಮಾಡಿ ಎಮ್ಮೆಮಾಡು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ಶಾಸಕ ಪೊನ್ನಣ್ಣ ಮಾತನಾಡಿ ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ ,ವಿದ್ಯುತ್, ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ.
ಈ ಸಂದರ್ಭದಲ್ಲಿ ಜನರು ಸಂಬAಧಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅವರ ಕರೆಯನ್ನು ಸ್ವೀಕರಿಸುವ ಸೌಜನ್ಯ ಬೆಳೆಸಿಕೊಳ್ಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅತೀ ಗಾಳಿಯಿಂದ ಜಿಲ್ಲೆಯಲ್ಲಿ ೨೩೧೮ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು ಎಲ್ಲವನ್ನು ಸರಿಪಡಿಸಲು ಬದ್ಧನಿದ್ದೇನೆ ಎಂದರು.
ಮಡಿಕೇರಿ ತಹಶೀಲ್ದಾರ್ ಪ್ರವೀಣ್, ಕಂದಾಯ ಪರಿವೀಕ್ಷಕ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ತೆನ್ನೀರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ ,ವಲಯ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಾಚೇಟಿರ ಕುಸು ಕುಶಾಲಪ್ಪ, ಬಿದ್ದಾಟಂಡ ತಮ್ಮಯ್ಯ, ಪಂಚಾಯಿತಿ ಸದಸ್ಯರುಗಳಾದ ಐಸಮ್ಮ, ಇಸ್ಮಾಯಿಲ್, ಗಫೂರ್, ಯೂಸುಫ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.