ಮಡಿಕೇರಿ, ಜು. ೩೦: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೩ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ‘ಶಕ್ತಿ’ಯಲ್ಲಿ ಪ್ರಕಟಗೊಂಡ ೫ ವರದಿಗಳು ಪ್ರಶಸ್ತಿಗೆ ಭಾಜನವಾಗಿವೆ.
ಸಂಘದ ಮಾಜಿ ಅಧ್ಯಕ್ಷ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ದೇಶದ ಪ್ರತಿಷ್ಠಿತ ಹಾಕಿ ಪಂದ್ಯಾವಳಿಗಳ ಪಟ್ಟಿಯಲ್ಲಿ ಕೊಡವ ಹಾಕಿ ಹಬ್ಬ’ ವರದಿಗೆ ‘ಶಕ್ತಿ’ಯ ಹಿರಿಯ ಉಪಸಂಪಾದಕ ಕಾಯಪಂಡ ಶಶಿ ಸೋಮಯ್ಯ ಪಡೆದುಕೊಂಡಿದ್ದಾರೆ.
ಪಂದ್ಯAಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ನದಿ ತೀರದಲ್ಲಿ ನರಕದ ಜೀವನ' ವರದಿಗೆ ಸಿದ್ದಾಪುರ ವರದಿಗಾರ ಎ.ಎನ್.ವಾಸು, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಶುಂಠಿ ಬೆಳೆಯಲು ಮರಗಳ ಮಾರಣ ಹೋಮ’ ವರದಿಗೆ ಕುಶಾಲನಗರ ವರದಿಗಾರ ಎಂ.ಎನ್.ಚAದ್ರಮೋಹನ್, ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಒಂದೇ ಕೊಠಡಿಯಲ್ಲಿ ಊಟ-ನಿದ್ದೆ-ಪಾಠ' ವರದಿಗೆ ಗೋಣಿಕೊಪ್ಪ ವರದಿಗಾರ ಹೆಚ್.ಕೆ.ಜಗದೀಶ್, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಜಿಲ್ಲೆಯಲ್ಲಿ ಅವನತಿಯತ್ತ ಗೋ ಸಂತತಿ' ವರದಿಗೆ ಶ್ರೀಮಂಗಲ ವರದಿಗಾರ ಅಣ್ಣೀರ ಹರೀಶ್ ಮಾದಪ್ಪ ಪಡೆದುಕೊಂಡಿದ್ದಾರೆ.
ಸಂಘದ ಮಾಜಿ ಉಪಾಧ್ಯಕ್ಷ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ರಿಪಬ್ಲಿಕ್ ಕನ್ನಡ ಚಾನಲ್ ನಲ್ಲಿ ಪ್ರಸಾರವಾಗಿರುವ ‘ಮುರಿದು ಬೀಳುವ ಸ್ಥಿತಿಯಲ್ಲಿ ಬಿದಿರಿನ ಸೇತುವೆ’ ಸುದ್ದಿಯ ವೀಡಿಯೋಗ್ರಫಿಗೆ ಕೆ.ಬಿ.ದಿವಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ‘ಹುಲಿ ಬಂತು ಹುಲಿ' ವರದಿಗೆ ಜಗದೀಶ್ ಜೋಡುಬೀಟಿ, ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಕೊಡಗಿನ ಕಿತ್ತಳೆ ಕಾಣೆ,ಬಟರ್ ಫ್ರೂಟ್‌ಗೆ ಮಣೆ' ವರದಿಗೆ ಸುನಿಲ್ ಪೊನ್ನೇಟಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ತುತ್ತಿಗೆ ಪರದಾಡುವ ವೃದ್ದ ಗಿರಿಜನರು' ವರದಿಗೆ ಹಿರಿಕರ ರವಿ, ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ದ್ಯಾವಮ್ಮ ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ‘ಅಭಿವೃದ್ದಿ ಹೆಸರಿನಲ್ಲಿ ಮರಗಳ ಮಾರಣಹೋಮ' ವರದಿಗೆ ವಿಷ್ಮಾ ಪೆಮ್ಮಯ್ಯ ತಮ್ಮದಾಗಿಸಿಕೊಂಡಿದ್ದಾರೆ.
ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬAಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ಚಿತ್ತಾರ ಚಾನಲ್‌ನಲ್ಲಿ ಪ್ರಸಾರವಾದ ‘ಮಾಜಿ ಯೋಧನ ಜೇನಿನ ಬದುಕು' ವರದಿಗೆ ವಿಶ್ವ ಕುಂಬೂರು, ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿವಂಗತ ಟಿ.ಕೆ.ಸುಬ್ರಮಣ್ಯ ಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ‘ಕೊಡಗಿನ ಈ ಕುಗ್ರಾಮದ ಪಾಡು ದೇವರಿಗೆ ಪ್ರೀತಿ’ ವರದಿಗೆ ಮಲ್ಲಿಕಾರ್ಜುನ , ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜ ಕೋಟೆರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ ಪ್ರಶಸ್ತಿಯನ್ನು ಆಂದೋಲನ ಪತ್ರಿಕೆಯಲ್ಲಿ ಪ್ರಕಟವಾದ ‘ಗೋಧಿ,ಮೈದಾ,ಅಕ್ಕಿ ಅವಲಕ್ಕಿಯಲ್ಲಿ ಹುಳು ವರದಿಗೆ’ ಕೃಷ್ಣ ಸಿದ್ದಾಪುರ, ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತ್ತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಯನ್ನು ಜನಮಿತ್ರ ಪತ್ರಿಕೆಯಲ್ಲಿ ಪ್ರಕಟವಾದ ‘ಕೃಷಿಯಲ್ಲಿ ಸಾರ್ಥಕ ಬದುಕು ಕಟ್ಟಿಕೊಂಡ ರವಿಶಂಕರ್’ ವರದಿಗೆ ಉದಿಯಂಡ ಜಯಂತಿ ಮಂದಣ್ಣ ಪಡೆದುಕೊಂಡಿದ್ದಾರೆ.
ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸುದ್ದಿ ಛಾಯಾ ಚಿತ್ರ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಮಡಿಕೇರಿಯಲ್ಲಿ ಮಣ್ಣಿನಡಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯ’ ವರದಿಯ ಚಿತ್ರಕ್ಕೆ ರಂಗಸ್ವಾಮಿ ಪಡೆದುಕೊಂಡಿದ್ದಾರೆ. ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಸಾಹಿತಿ ದಿವಂಗತ ಡಿ.ಕೃಷ್ಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕೃತಿಕ ವರದಿ ಪ್ರಶಸ್ತಿಯನ್ನು ಪ್ರತಿನಿಧಿ ಪತ್ರಿಕೆಯಲ್ಲಿ ಪ್ರಕಟವಾದ ‘ಸ್ಫ್ಪೂರ್ತಿಯ ಸಾಧಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್’ ವರದಿಗೆ ಅಜ್ಜಮಾಡ ರಮೇಶ್ ಕುಟ್ಟಪ್ಪ ಪಡೆದುಕೊಂಡಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.