ಶಿರಾಡಿ ಘಾಟ್ನಲ್ಲಿ ಮತ್ತೆ ಗುಡ್ಡ ಕುಸಿತ
ಹಾಸನ, ಜು. ೩೦: ಶಿರಾಡಿಘಾಟ್ನ ರಾಷ್ಟಿçÃಯ ಹೆದ್ದಾರಿ ೭೫ರಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟಿçÃಯ ಹೆದ್ದಾರಿ ೭೫ರಲ್ಲಿ ಚಲಿಸುತ್ತಿದ್ದ ಕಾರು, ಲಾರಿ, ಗ್ಯಾಸ್ ಟ್ಯಾಂಕರ್ ಮೇಲೆ ಗುಡ್ಡ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಮತ್ತೊಮ್ಮೆ ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಘಟನೆಯಿಂದ ಸಂಚಾರ ದಟ್ಟಣೆ ಏರ್ಪಟ್ಟು ಈ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಮಣ್ಣು ತೆರವು ಮಾಡುವ ಕಾರ್ಯಾಚರಣೆ ಪ್ರಾರಂಭಿಸಿದರು. ಸುಮಾರು ಆರು ಗಂಟೆಗಳ ಕಾಲ ಸಂಚಾರ ಬಂದ್ ಮಾಡಲಾಗಿತ್ತು. ಅದರಂತೆ ಪುತ್ತೂರು ಸಂಪಾಜೆ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿ ತೆರವು ಕಾರ್ಯಾಚರಣೆ ಹಿನ್ನೆಲೆ ಮೂರು ಗಂಟೆಗಳ ಕಾಲ ಸಂಚಾರ ನಿಷೇಧಿಸಲಾಗಿತ್ತು.
ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರ ಗಡಿಪಾರಿಗೆ ಕ್ರಮ
ಬೆಂಗಳೂರು, ಜು. ೩೦: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ರಾಜ್ಯ ಮತ್ತು ರಾಷ್ಟç ಎರಡಕ್ಕೂ ಅಪಾಯ ತಂದೊಡ್ಡಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನಂತರ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಿAದ ಕರ್ನಾಟಕಕ್ಕೆ ಬರುವವರನ್ನು ಪೊಲೀಸರು ಗುರುತಿಸಲಿದ್ದಾರೆ. ಅವರು ಪಾಸ್ಪೋರ್ಟ್, ವೀಸಾದಂತಹ ಮಾನ್ಯ ದಾಖಲೆಗಳನ್ನು ಹೊಂದಿಲ್ಲದಿದ್ದರೆ ಅವರನ್ನು ತಕ್ಷಣ ಬಂಧಿಸಿ ಬಂಧನ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಅದರ ನಂತರ, ನಾವು ಅವರ ಪ್ರಜೆಗಳ ಬಂಧನದ ಬಗ್ಗೆ ಬಾಂಗ್ಲಾದೇಶ ಹೈಕಮಿಷನ್ ಅಥವಾ ರಾಯಭಾರಿಗೆ ತಿಳಿಸುತ್ತೇವೆ. ಬಾಂಗ್ಲಾದೇಶಿ ಪ್ರಜೆಗಳು ರಾಜಕೀಯ ಬೆಂಬಲವನ್ನು ಹೊಂದಿರುವುದರಿAದ ಅವರನ್ನು ಗಡಿಪಾರು ಮಾಡಲು ಸಾಧ್ಯವಾಗಿಲ್ಲ ಎಂಬ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಬಿಜೆಪಿ ನಾಯಕ ಬಿ. ಭಾಸ್ಕರ್ ರಾವ್ ಹೇಳಿಕೆಗೆ ಸಚಿವರು ಆಕ್ರೋಶ ವ್ಯಕ್ತಪಡಿಸಿದರು. ಆಯುಕ್ತರಾಗಿದ್ದ ಅವಧಿಯಲ್ಲಿ ಅವರಿಂದ ಸಾಧ್ಯವಾಗಿರದಿದ್ದ ಕಾರ್ಯವನ್ನು ಈಗ ನಾವು ಮಾಡುತ್ತಿದ್ದೇವೆ ಎಂದು ಪರಮೇಶ್ವರ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಬಜೆಟ್ಗೆ ಅನುಮೋದನೆ
ನವದೆಹಲಿ, ಜು. ೩೦: ಜಮ್ಮು ಮತ್ತು ಕಾಶ್ಮೀರಕ್ಕೆ ೨೦೨೪-೨೫ನೇ ಸಾಲಿನ ಬಜೆಟ್ಗೆ ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆ ದೊರೆತಿದೆ. ಧ್ವನಿ ಮತದ ಮೂಲಕ ಜಮ್ಮ ಮತ್ತು ಕಾಶ್ಮೀರದ ಬಜೆಟ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುಮೋದನೆ ಪಡೆದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯನ್ನು ೨೦೨೪-೨೫ರವರೆಗೆ ಜಿಡಿಪಿಯ ಶೇ. ೪.೯ರಷ್ಟು ತಗ್ಗಿಸಲಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಇದನ್ನು ಶೇ. ೪.೫ಕ್ಕೆ ತರಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ೩೭೦ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಅಲ್ಲಿ ಚುನಾಯಿತ ಸರ್ಕಾರ ಇನ್ನಷ್ಟೇ ಸ್ಥಾಪನೆಯಾಗಬೇಕಿದೆ. ಹೀಗಾಗಿ ಹಿಂದಿನ ಸಾಲಿನಂತೆಯೇ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಅನ್ನು ಲೋಕಸಭೆಯಲ್ಲಿ ಈ ಬಾರಿಯೂ ಮಂಡಿಸಲಾಯಿತು.
ರಾಜಸ್ಥಾನದಿAದ ರೈಲಿನಲ್ಲಿ ಬಂದಿದ್ದು ಮೇಕೆ ಮಾಂಸ
ಬೆAಗಳೂರು, ಜು. ೩೦: ರೈಲು ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸವೆAದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಚಿತಪಡಿಸಿದೆ. ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜೊತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು. ಈ ಬೆಳವಣಿಗೆ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿತ್ತು. ಶುಕ್ರವಾರ ಸಂಜೆಯ ವೇಳೆಗೆ ನಡೆದ ಈ ಘಟನೆ ಕೆಲವೇ ನಿಮಿಷಗಳಲ್ಲಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ವಿವಾದವಾಗುತ್ತಿದಂತೆ ಆರೋಗ್ಯಾ ಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಮಾಂಸವನ್ನು ವಶಕ್ಕೆ ಪಡೆದು ಅದರ ಪರೀಕ್ಷೆಗಾಗಿ ಲ್ಯಾಬ್ಗೆ ಕಳುಹಿಸಿದ್ದರು. ಅದರ ಪರೀಕ್ಷೆ ನಡೆಸಿದ ಪ್ರಯೋಗಾಲ ಯದವರು ಅದು ಮೇಕೆ ಮಾಂಸ ಎಂದು ವರದಿ ನೀಡಿದ್ದಾರೆ. ಪ್ರಯೋಗಾ ಲಯದ ಪರೀಕ್ಷೆಯಲ್ಲಿ ಈ ಮಾಂಸವು ನಾಯಿಯದ್ದಲ್ಲ, ಮೇಕೆಯದ್ದು ಎಂದು ತಿಳಿದುಬಂದಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ರಾಜ್ಯ ಆಯುಕ್ತ ಶ್ರೀನಿವಾಸ್ ಕೆ. ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನು ಸಿರೋಹಿ ಮೇಕೆ ಮಾಂಸ ಎಂದು ಗುರುತಿಸಲಾಗಿದೆ. ಈ ತಳಿಯ ಮೇಕೆಗಳು ಮಚ್ಚೆಯುಳ್ಳ ದೇಹ ಮತ್ತು ಸ್ವಲ್ಪ ಉದ್ದವಾದ ಬಾಲವನ್ನು ಹೊಂದಿರುವುದು ವಿಶಿಷ್ಟವಾಗಿದೆ. ಹೀಗಾಗಿ ಈ ಮೇಕೆಗಳು ನಾಯಿಯನ್ನು ಹೋಲುತ್ತವೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಬೆಂಗಳೂರು, ಜು. ೩೦: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು. ಇದರ ವೀಡಿಯೋ ಹಿಡಿದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟಿçÃಯ ಅಧ್ಯಕ್ಷ ರಾಮು ಅವರು ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.