ನಾಪೋಕ್ಲು, ಜು. ೩೧: ಇಲ್ಲಿಗೆ ಸಮೀಪದ ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೀಡುವ ಉಚಿತ ಶೂ ಮತ್ತು ಸಾಕ್ಸ್ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಸಭಾಂಗಣದಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಅವರು ವಿದ್ಯಾರ್ಥಿಗಳಿಗೆ ಪಾದರಕ್ಷೆಗಳನ್ನು ವಿತರಿಸಿ ಮಾತನಾಡಿ, ಸರ್ಕಾರದಿಂದ ಎಲ್ಲಾ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ದೊರೆಯುತ್ತಿದ್ದು, ಇದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿಯಿಂದ ತೊಡಗಿಸಿ ಕೊಳ್ಳಬೇಕು. ಹಾಗಾದರೆ ಮಾತ್ರ ಸರಕಾರದ ಇಂತಹ ಯೋಜನೆಗಳಿಗೆ ಅರ್ಥ ಲಭಿಸಲಿದೆ ಎಂದರು. ಶಾಲಾ ಮುಖ್ಯೋಪಾ ಧ್ಯಾಯ ವೇದಪ್ರಸಾದ್ ಅವರ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.