ಮಡಿಕೇರಿ, ಜು. ೩೧: ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸ್ವಾಯತ್ತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿರುತ್ತದೆ. ಕಿದ್ವಾಯಿ ಚಿಕಿತ್ಸೆಯಲ್ಲಿ ಕ್ಯಾನ್ಸರ್‌ಗೆ ಸಂಬAಧಿಸಿದAತೆ ಗುಣಮಟ್ಟದ ವಿವಿಧ ರೀತಿಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ(ಬಿಪಿಎಲ್) ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆಯನ್ನು ಹಾಗೂ ಬಡತನ ರೇಖೆಗಿಂತ ಮೇಲಿರುವ(ಎಪಿಎಲ್) ಜನರಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಅದೇ ರೀತಿ ಪರಿಶಿಷ್ಟ ಪಂಗಡದ ಜನರಿಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಪರಿಶಿಷ್ಟ ಪಂಗಡದ ಜನಾಂಗದವರು ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಬಹುದಾಗಿದ್ದು, ಆಸಕ್ತರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.