ಮಂಗಳವಾಕುಶಾಲನಗರ, ಜು. ೩೧: ಕುಶಾಲನಗರ ಅರಣ್ಯ ವಲಯ ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರ ಪ್ರವಾಸಿ ತಾಣಕ್ಕೆ ಪ್ರವಾಸಿಗರ ಭೇಟಿಯನ್ನು ವಾರದ ಪ್ರತಿ ಮಂಗಳವಾರ ನಿರ್ಬಂಧಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಇತ್ತೀಚೆಗೆ ಕೊಡಗು ಮಾನವ ವನ್ಯಜೀವಿ ಸಂಘರ್ಷ ಉಪಶಮನ ಪ್ರತಿಷ್ಠಾನ ನಿಧಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರವಾಸೋದ್ಯಮ ರ ದುಬಾರೆ ಶಿಬಿರಕ್ಕೆ ಪ್ರವೇಶ ನಿರ್ಬಂಧ..!ಚಟುವಟಿಕೆಗಳ ನಿರ್ವಹಣೆಗಾಗಿ ವಾರದಲ್ಲಿ ಒಂದು ದಿನ ದುಬಾರೆ ಆನೆ ಶಿಬಿರದ ನಿರ್ವಹಣಾ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರವಾಸಿಗರಿಗೆ ಪ್ರತಿ ವಾರದಲ್ಲಿ ಒಂದು ದಿನ ಶಿಬಿರವನ್ನು ಮುಚ್ಚುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆ ಸಾಕಾನೆ ಶಿಬಿರದಲ್ಲಿ ಪ್ರಸ್ತುತ ೩೦ ಸಾಕಾನೆಗಳಿದ್ದು ಶಿಬಿರವು ಪ್ರವಾಸೋದ್ಯಮ ದೃಷ್ಟಿಯಿಂದ ಸಾಕಾನೆಗಳ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗಿರದೆ ಸೆರೆಹಿಡಿದ ಕಾಡಾನೆಗಳನ್ನು ಪಳಗಿಸುವ ರಾಜ್ಯದ ಪ್ರಮುಖ ಕೇಂದ್ರ ಆಗಿದೆ.

ಇತ್ತೀಚೆಗೆ ಶಿಬಿರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯು ಹೆಚ್ಚಾಗುತ್ತಿರುವುದರಿಂದ ಶಿಬಿರದ ನಿರ್ವಹಣೆಗೆ ಹೆಚ್ಚಿನ ಒತ್ತಡ ಉಂಟಾಗುತ್ತಿದೆ. ಪ್ರತಿದಿನ ಶಿಬಿರವನ್ನು ತೆರೆಯುವುದರಿಂದ ಆನೆಗಳ ಆರೋಗ್ಯ ,ತರಬೇತಿ ಶಿಬಿರದ ಸ್ವಚ್ಛತೆ ಇತ್ಯಾದಿ ಕಾರ್ಯಗಳಿಗೆ ಸಮಯದ ಅಭಾವ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆರೆಹಿಡಿಯಲಾದ ಕಾಡಾನೆಗಳನ್ನು ದುಬಾರೆ ಶಿಬಿರದಲ್ಲಿ ಪಳಗಿಸಲಾಗುತ್ತಿದೆ. ದಿನದಿಂದ ದಿನಕ್ಕೆ ನೂರಾರು ಸಂಖ್ಯೆಯ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಆನೆಗಳ ಆರೋಗ್ಯ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಶಿಬಿರದ ನಿರ್ವಹಣಾ ಚಟುವಟಿಕೆಗಳನ್ನು ಕೈಗೊಳ್ಳುವ ಉದ್ದೇಶದಿಂದ ಆಗಸ್ಟ್ ಒಂದರಿAದ (ಇಂದಿನಿAದ) ಅನ್ವಯವಾಗುವಂತೆ ವಾರದಲ್ಲಿ ಒಂದು ದಿನ ಅಂದರೆ ಪ್ರತಿ ಮಂಗಳವಾರ ಶಿಬಿರಕ್ಕೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸುವುದು ಸೂಕ್ತ ಎನ್ನುವ ತೀರ್ಮಾನಕ್ಕೆ ಬಂದಿದ್ದು ಈ ಸಂಬAಧ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಆಗಸ್ಟ್ ಒಂದರಿAದ ಈ ಆದೇಶ ಜಾರಿಯಾಗಲಿದ್ದು ಹಬ್ಬ, ನಿರಂತರ ಸಾರ್ವತ್ರಿಕ ರಜೆ ಇತ್ಯಾದಿ ವಿಶೇಷ ಸಂದರ್ಭಗಳಲ್ಲಿ ಮಂಗಳವಾರ ಪ್ರವಾಸಿಗರಿಗೆ ಅವಕಾಶ ನೀಡುವ ಅಧಿಕಾರ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

ಪ್ರತಿ ಮಂಗಳವಾರ ದುಬಾರೆ ಶಿಬಿರದ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಎಂದಿನAತೆ ಶಿಬಿರದ ನಿರ್ವಹಣಾ ಚಟುವಟಿಕೆಗಳನ್ನು ನಿರ್ವಹಿಸಬೇಕಾಗಿದೆ ಮತ್ತು ಆನೆ ಜಮಾದಾರ, ಮಾವುತ, ಕಾವಾಡಿ ಇವರು ಎಂದಿನAತೆ ಆನೆಯ ಉಸ್ತುವಾರಿ ಮತ್ತು ನಿರ್ವಹಣೆ ಮಾಡಬೇಕಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

-ಚಂದ್ರಮೋಹನ್