ಸೋಮವಾರಪೇಟೆ ಮಂಡಲ ಕಾರ್ಯಕಾರಿಣಿಯಲ್ಲಿ ನಿರ್ಣಯ
ಸೋಮವಾರಪೇಟೆ, ಆ. ೨: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದೊಂದಿಗೆ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಇದನ್ನು ವಿರೋಧಿಸಿ ಸರ್ಕಾರದ ದುರಾಡಳಿತದ ವಿರುದ್ಧ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿರಂತರ ಹೋರಾಟ ಸಂಘಟಿಸಲು ಇಲ್ಲಿ ನಡೆದ ಮಂಡಲ ಕಾರ್ಯಕಾರಿಣಿಯಲ್ಲಿ ನಿರ್ಧರಿಸಲಾಯಿತು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ತಂದಿರುವ ೩ ಕಾನೂನುಗಳು ಕೊಡಗಿನ ರೈತರು, ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಇದರೊಂದಿಗೆ ಸ್ವತಃ ಮುಖ್ಯಮಂತ್ರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅವೈಜ್ಞಾನಿಕ ಯೋಜನೆಗಳಿಂದ ಬೊಕ್ಕಸ ಬರಿದಾಗಿದ್ದು, ಅಭಿವೃದ್ಧಿ ಶೂನ್ಯವಾಗಿದ ಎಂದು ಪಕ್ಷದ ಮುಖಂಡರುಗಳು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಇಲ್ಲಿನ ಕೊಡವ ಸಮಾಜದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜನೆಗೊಂಡಿದ್ದ ಮಂಡಲ ವಿಶೇಷ ಕಾರ್ಯಕಾರಿಣಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು, ಮುಂದಿನ ದಿನಗಳಲ್ಲಿ ಹೋರಾಟವನ್ನು ಸಂಘಟಿಸಲು ತೀರ್ಮಾನಿಸಲಾಯಿತು.
ಕಾರ್ಯಕಾರಿಣಿಯಲ್ಲಿ ‘ನರೇಂದ್ರ ಮೋದಿ ಅವರಿಗೆ ಅಭಿನಂದನೆ’ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರಿದ ನರೇಂದ್ರ ಮೋದಿ ಅವರು ಒಂದೇ ಒಂದು ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಆಡಳಿತ ನಡೆಸುತ್ತಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಭಾರತಕ್ಕೆ ವಿಶ್ವಮಟ್ಟದಲ್ಲಿ ಗೌರವ ಹೆಚ್ಚಿಸಿದ್ದಾರೆ ಎಂದರು.
ಇದರೊAದಿಗೆ ಪ್ರತಿ ಮನೆಗೂ ವಿದ್ಯುತ್ ಸೌಕರ್ಯ, ಅಡುಗೆ ಅನಿಲ ವಿತರಣೆ, ಜನೌಷಧ್ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಮೆಡಿಕಲ್ ಕಾಲೇಜುಗಳ ನಿರ್ಮಾಣ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ, ರೈಲ್ವೇ, ವಿಮಾನಯಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಣಲಾಗುತ್ತಿದೆ ಎಂದ ರಂಜನ್, ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ ೬ ಸಾವಿರದೊಂದಿಗೆ ರಾಜ್ಯದ ೪ ಸಾವಿರ ಹಣ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ೪ ಸಾವಿರವನ್ನು ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.
ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಬಿಜೆಪಿ ಸರ್ಕಾರದಿಂದ ಕನಿಷ್ಟ ೫೦ ಸಾವಿರದಿಂದ ಗರಿಷ್ಠ ೫ ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಪ್ರಳಯದಿಂದ ಮನೆ ಕಳೆದುಕೊಂಡವರಿಗೆ ನಿವೇಶನ ಕಲ್ಪಿಸಿ ರೂ. ೧೦ ಲಕ್ಷ ವೆಚ್ಚದಲ್ಲಿ ಮನೆಯನ್ನೂ ನಿರ್ಮಿಸಿಕೊಡಲಾಗಿದೆ. ಆದರೆ ಕಾಂಗ್ರೆಸ್ ಬಂದ ನಂತರ ಮಳೆಯಿಂದ ಮನೆಗಳಿಗೆ ಹಾನಿಯಾದರೆ ಪರಿಹಾರವನ್ನು ೬ ಸಾವಿರದಿಂದ ಗರಿಷ್ಠ ೧.೨೦ ಲಕ್ಷಕ್ಕೆ ಇಳಿಸಿದೆ. ಇಂತಹ ಜನವಿರೋಧಿ ಸರ್ಕಾರ ಈವರೆಗೆ ಬಂದಿರಲಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರವಿದ್ದಾಗ ಮಡಿಕೇರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಯಿತು. ಇದರಿಂದಾಗಿ ಕೊರೊನಾ ಸಂದರ್ಭ ೪೬ ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಯಿತು. ಒಂದು ವೇಳೆ ಇಂತಹ ಶಾಶ್ವತ ಯೋಜನೆ ಇಲ್ಲವಾಗಿದ್ದರೆ ಸಾವು ನೋವು ಹೆಚ್ಚಾಗುತ್ತಿತ್ತು ಎಂದ ಅಪ್ಪಚ್ಚು ರಂಜನ್, ಮಡಿಕೇರಿಯಲ್ಲಿ ೪೫೦ ಬೆಡ್ ಸಾಮರ್ಥ್ಯದ ನೂತನ ಆಸ್ಪತ್ರೆಯನ್ನು ಬಿಜೆಪಿ ಸರ್ಕಾರ ನಿರ್ಮಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಕೊಡಗಿಗೆ ನಯಾಪೈಸೆಯನ್ನೂ ನೀಡಿಲ್ಲ ಎಂದು ಟೀಕಿಸಿದರು.
ರಂಜನ್ ಅವರು ಮಂಡಿಸಿದ ವಿಚಾರವನ್ನು ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಅನುಮೋದಿಸಿ, ಅಂತ್ಯೋದಯ, ಆತ್ಮ ನಿರ್ಭರತೆ ಸಿದ್ದಾಂತದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಮೋದಿ ಅವರ ಆಡಳಿತವನ್ನು ದೇಶ ಮೆಚ್ಚಿದೆ ಎಂದರು.
ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳ ಹಣ ಬರುತ್ತಿಲ್ಲ. ಈ ಗ್ಯಾರಂಟಿಗಳು ಕಾಂಗ್ರೆಸ್‌ನ ಎಲೆಕ್ಷನ್ ಗಿಮಿಕ್ ಎಂಬುದು ಜನರಿಗೆ ಗೊತ್ತಾಗಿದೆ. ಮಳೆಹಾನಿಯಾದರೆ ಬಿಜೆಪಿ ಸರ್ಕಾರ ಲಕ್ಷ ಪರಿಹಾರ ನೀಡುತ್ತಿತ್ತು. ಈಗಿನ ಕಾಂಗ್ರೆಸ್ ಬಿಡಿಗಾಸೂ ನೀಡಿಲ್ಲ ಎಂದು ದೂರಿದರು.
ಸ್ಥಳೀಯ ಸಮಸ್ಯೆಗಳು ವಿಚಾರದ ಬಗ್ಗೆ ಮಾತನಾಡಿದ ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಡಗು ವಿರೋಧಿ ಸುತ್ತೋಲೆಗಳನ್ನು ಹೊರಡಿಸಿದೆ. ಸಿ. ಮತ್ತು ಡಿ. ಜಾಗಗಳಿಗೆ ಹಕ್ಕುಪತ್ರ ನೀಡಿ, ಸಕ್ರಮಗೊಳಿಸಿ ರೈತರಿಗೆ ನೀಡಲು ಬಿಜೆಪಿ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಸಿ. ಮತ್ತು ಡಿ ಜಾಗವನ್ನು ಮೀಸಲು ಅರಣ್ಯ ಎಂದು ಘೋಷಿಸಿ ರೈತರಿಂದ ಕಿತ್ತುಕೊಳ್ಳಲು ಹೊರಟಿದೆ. ಈ ಬಗ್ಗೆ ಪ್ರತಿ ಗ್ರಾಮ ಸಭೆಯಲ್ಲೂ ಚರ್ಚೆ ನಡೆಸಿ, ಸುತ್ತೋಲೆಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಬೇಕಿದೆ ಎಂದರು.
ಇದರೊAದಿಗೆ ವನ್ಯಪ್ರಾಣಿಗಳ ಕೊಂಬು ಸೇರಿದಂತೆ ಇನ್ನಿತರ ಭಾಗಗಳನ್ನು ವಾಪಸ್ ನೀಡುವಂತೆ ಆದೇಶ ಹೊರಡಿಸಿದೆ. ರೈತರು, ಬೆಳೆಗಾರರು ತಾವು ತೋಟಗಳಲ್ಲಿ ಬೆಳೆದಿರುವ ಮರಗಳಿಗೆ ಅರಣ್ಯ ಇಲಾಖೆಯಿಂದ ನಂಬರ್ ಹಾಕಿಸುತ್ತಿದೆ. ಮುದೊಂದು ದಿನ ಈ ಮರಗಳನ್ನು ಸರ್ಕಾರ ತನ್ನ ವಶಕ್ಕೆ ಪಡೆಯುವ ಹುನ್ನಾರ ನಡೆಸಿದೆ. ಇಂತಹ ಉಪದ್ರವಿ ಸರ್ಕಾರ ಈವರೆಗೆ ಬಂದಿಲ್ಲ ಎಂದರು.
ಈ ವಿಚಾರವನ್ನು ಅನುಮೋದಿಸಿದ ಬಿಜೆಪಿ ಉಪಾಧ್ಯಕ್ಷ ಹೆಚ್.ಕೆ. ಮಾದಪ್ಪ, ಸ್ಥಳೀಯ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ಸಂಘಟಿಸಬೇಕೆAದು ಕರೆ ನೀಡಿದರು. ಮಾಜೀ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಬಿಜೆಪಿ ಸರ್ಕಾರವಿದ್ದಾಗ ೪೦ ಪರ್ಸೆಂಟ್ ಕಮಿಷನ್ ಸರ್ಕಾರ, ಪೇ ಸಿ.ಎಂ. ಎಂದು ಸುಳ್ಳು ಹೇಳಿದ್ದನ್ನು ಜನರು ನಂಬಿ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ಆರಂಭದಿAದ ಇಲ್ಲಿಯವರೆಗೂ ಸರ್ಕಾರ ಭ್ರಷ್ಟಾಚಾರದಲ್ಲಿ ಮಾಡುತ್ತಿದೆ. ಇದಕ್ಕೆ ವಾಲ್ಮೀಕಿ ನಿಗಮ ಹಾಗೂ ಮೂಡಾ ನಿವೇಶನ ಹಗರಣಗಳೇ ಸಾಕ್ಷಿಯಾಗಿದೆ ಎಂದರು.
ವಾಲ್ಮೀಕಿ ನಿಗಮದಲ್ಲಿ ರೂ. ೧೮೭ ಕೋಟಿ ಹಗರಣ ಆಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಆದರೆ ಸಚಿವರು, ಮುಖ್ಯಮಂತ್ರಿ ತಪ್ಪು ಮಾಡಿಲ್ಲ ಎಂದು ಮೊಂಡುವಾದ ಮಾಡುತ್ತಿದ್ದಾರೆ. ಇಂತಹ ಧಿಮಾಕಿನ ಸರ್ಕಾರವನ್ನು ಕಿತ್ತೊಗೆಯಬೇಕಿದೆ. ೧೩೬ ಸ್ಥಾನ ಬಂದಿರುವುದಕ್ಕೆ ಅಹಂ ಹೆಚ್ಚಿದೆ. ವಾಲ್ಮೀಕಿ ನಿಗಮ ಮತ್ತು ಮೂಡಾ ಹಗರಣದ ಬಗ್ಗೆ ಹೆಚ್ಚಿನ ತನಿಖೆಗೆ ಆಗ್ರಹಿಸಿ ತಾ. ೩ ರಿಂದ ೧೦ ರವರೆಗೆ ಬೆಂಗಳೂರಿನಿAದ ಮೈಸೂರಿನವರೆಗೆ ಬಿಜೆಪಿಯಿಂದ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಅವೈಜ್ಞಾನಿಕ ಬಿಟ್ಟಿ ಭಾಗ್ಯಗಳಿಗೆ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಇದು ಎಲ್ಲಾ ವರ್ಗದ ಜನರನ್ನು ಬಾಧಿಸುತ್ತಿದೆ. ಪೆಟ್ರೋಲ್, ಡೀಸೆಲ್, ಮದ್ಯ, ಹಾಲು, ಸ್ಟಾö್ಯಂಪ್ ಪೇಪರ್ ಬೆಲೆಯನ್ನು ಗಗನಕ್ಕೆ ಮುಟ್ಟಿಸಿದೆ. ಭಾಗ್ಯಗಳಿಂದ ಹಣವೂ ಬರುತ್ತಿಲ್ಲ; ಇತ್ತ ಅಭಿವೃದ್ಧಿ ಕಾರ್ಯಗಳೂ ಆಗುತ್ತಿಲ್ಲ ಎಂದು ದೂರಿದರು.
ಪಕ್ಷದ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲಾಗಿದ್ದರೂ ನಂತರದ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಬಲಗೊಂಡಿದೆ. ಎಂಎಲ್‌ಸಿ, ಎಂ.ಪಿ. ಸೇರಿದಂತೆ ಸಹಕಾರಿ ಸಂಘದ ಚುನಾವಣೆಗಳಲ್ಲಿ ಬಿಜೆಪಿ ಜಯಗಳಿಸಿದೆ.
ವೀರಾಜಪೇಟೆ ಕ್ಷೇತ್ರದ ಶಾಸಕರ ತವರು ಸಹಕಾರ ಸಂಘದಲ್ಲಿ ೧೩ ಸ್ಥಾನಗಳ ಪೈಕಿ ಬಿಜೆಪಿ ೧೨ರಲ್ಲಿ ಜಯಗಳಿಸಿದೆ. ಜನರು ಕಾಂಗ್ರೆಸ್‌ನ ಜನವಿರೋಧಿ ನೀತಿಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಮುಂಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಬೇಕಿದೆ ಎಂದರು.
ಕಾರ್ಯಕಾರಿಣಿ ವೇದಿಕೆಯಲ್ಲಿ ಪಕ್ಷದ ಮುಖಂಡರುಗಳಾದ ಶುಶ್ರೂತ್ ಗೌಡ, ವಿ.ಕೆ. ಲೋಕೇಶ್, ಮಹೇಶ್ ಜೈನಿ, ಅಭಿಮನ್ಯುಕುಮಾರ್, ಮನುಕುಮಾರ್ ರೈ, ಮಚ್ಚಂಡ ಪ್ರಕಾಶ್, ಕವಿತಾ ವಿರೂಪಾಕ್ಷ, ಮಹೇಶ್ ತಿಮ್ಮಯ್ಯ, ದರ್ಶನ್ ಜೋಯಪ್ಪ, ಮೋಹಿತ್, ಮೋಕ್ಷಿಕ್‌ರಾಜ್, ಸುಂಟಿಕೊಪ್ಪ ಸುನಿಲ್, ಜಗನ್ನಾಥ್, ಪ್ರವೀಣ್, ಆರ್.ಕೆ. ಚಂದ್ರು, ಸೋಮೇಶ್, ಕಂಠಿ ಕಾರ್ಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.