ಕುಶಾಲನಗರ, ಆ. ೨: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಶಾಲನಗರ ತಾಲೂಕಿನ ಮಾದಾಪಟ್ಟಣ ಗ್ರಾಮದ ಮಳೆ ಹಾನಿಯಾದ ಎರಡು ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆಗೆ ಉಭಯ ಕುಶಲೋಪರಿ ನಡೆಸಿದರು.

ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಅಗತ್ಯವಿರುವ ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು.

ಮಾದಾಪಟ್ಟಣ ಗ್ರಾಮದ ಬಸವರಾಜು ಮತ್ತು ಜಯಮ್ಮ ಅವರ ಅಗತ್ಯವಿರುವ ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು.

ಮಾದಾಪಟ್ಟಣ ಗ್ರಾಮದ ಬಸವರಾಜು ಮತ್ತು ಜಯಮ್ಮ ಅವರ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಎಲ್ಲ ರೀತಿಯ ಸಹಕಾರವನ್ನು ಸರ್ಕಾರದ ಮೂಲಕ ಒದಗಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭ ಉಸ್ತುವಾರಿ ಸಚಿವ ಬೋಸ್ ರಾಜ್, ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರ ಹಿರಿಯ ಅಧಿಕಾರಿಗಳು ಇದ್ದರು.

ನಂತರ ಮುಖ್ಯಮಂತ್ರಿಗಳು ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಅವರ ಕುಶಾಲನಗರದ ಗುಂಡೂರಾವ್ ಬಡಾವಣೆಯ ನಿವಾಸಕ್ಕೆ ತೆರಳಿ ಚಹಾ ಕೂಟದಲ್ಲಿ ಪಾಲ್ಗೊಂಡರು.