ನಾಪೋಕ್ಲು, ಆ. 1: ಸ್ಥಳೀಯ ಲಯನ್ಸ್ ಕ್ಲಬ್ ಕ್ಲಬ್ಬಿನ ಮತ್ತು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಮಾತನಾಡಿ, ಮಳೆಗಾಲದಲ್ಲಿ ಡೆಂಗ್ಯೂ ರೋಗ ಉಲ್ಬಣಿಸುತ್ತಿದೆ. ಜನರು ಜಾಗೃತರಾಗಿರಬೇಕು ಎಂದ ಅವರು, ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಡೆಂಗ್ಯೂ ಜ್ವರ ಬಾರದಂತೆ ನಿಯಂತ್ರಿಸಬಹುದು ಎಂದರು.

ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಲಿಯೋ ಕ್ಲಬ್ಬಿನ ಪದಾಧಿಕಾರಿ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪಟ್ಟಣದ ಮುಖ್ಯ ಬೀದಿಯಲ್ಲಿ ತೆರಳಿ ಬಿತ್ತಿಪತ್ರ ಹಂಚಿ ಮಾಹಿತಿ ನೀಡುವುದರ ಮೂಲಕ ಜನ ಜಾಗೃತಿ ಮೂಡಿಸಿದರು. ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದ ಉದ್ಘಾಟನೆಯನ್ನು ಠಾಣಾಧಿಕಾರಿ ಮಂಜುನಾಥ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಕೋಶಾಧಿಕಾರಿ ಕಾಂಡAಡ ರೇಖಾ ಪೊನ್ನಣ್ಣ, ಸದಸ್ಯರಾದ ಮುಕ್ಕಾಟಿರ ವಿನಯ್, ಕುಂಡ್ಯೋಳAಡ ಗಣೇಶ ಮುತ್ತಪ್ಪ, ಕೇಟೋಳಿರ ರತ್ನ ಚರ್ಮಣ, ಕುಂಡ್ಯೋಳAಡ ರಮೇಶ್ ಮುದ್ದಯ್ಯ, ಅಪ್ಪಾರಂಡ ಶಮ್ಮಿ ಅಪ್ಪಣ್ಣ, ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ಬೊಪ್ಪೆರ ಜಯ, ಕುಂಚೆಟ್ಟಿರ ಸುದಿ ಉತ್ತಪ್ಪ, ಸೇರಿದಂತೆ ಲಯನ್ಸ್ ಲಿಯೋ ಕ್ಲಬ್ಬಿನ ಪದಾಧಿಕಾರಿ ಸದಸ್ಯರು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.