ಮಡಿಕೇರಿ, ಆ. ೨: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ತಾ. ೪ ರಂದು (ನಾಳೆ) ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಗುವುದು. ಪೂವಾಹ್ನ ೧೦.೩೦ ಗಂಟೆಗೆ ಡಾ. ಪಾರ್ವತಿ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಲಾಗುವುದು. ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು, ರಾಷ್ಟಿçÃಯ ಹಾಗೂ ಅಂತರಾಷ್ಟಿçÃಯ ಮಟ್ಟದಲ್ಲಿ ವಿಜೇತರಾದ ಕ್ರೀಡಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಲಾಗುವುದು.

ಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗುವುದು. ಅಲ್ಲದೆ ಮುಂದಿನ ವರ್ಷದ ಕಾರ್ಯಯೋಜನೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು.