ಸಿದ್ದಾಪುರ, ಆ. 1: ನದಿ ತೀರದ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಸರಕಾರವನ್ನು ಒತ್ತಾಯ ಮಾಡಲಾಗು ವುದೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಅಶ್ವತ್ಥ ನಾರಾಯಣ ತಿಳಿಸಿದರು.

ಸಿದ್ದಾಪುರದ ಪ್ರವಾಹ ಪೀಡಿತ ಪ್ರದೇಶಗಳಾದ ಗುಹ್ಯ ಗ್ರಾಮದ ಕೂಡುಗದ್ದೆ ನದಿ ತೀರಕ್ಕೆ ಭೇಟಿ ನೀಡಿ ನದಿ ತೀರದ ನಿವಾಸಿಗಳ ಬಳಿ ಮಾತನಾಡಿದ ಅವರು, ತಮ್ಮ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯುದಾಗಿ ತಿಳಿಸಿದರು. ಬಿಜೆಪಿ ಸರ್ಕಾರವು ಅಧಿಕಾರದಲ್ಲಿರುವಂತ ಸಂದರ್ಭದಲ್ಲಿ ಪ್ರವಾಹ ಪೀಡಿತ ಪ್ರದೇಶದ ಸಂತ್ರಸ್ತರಿಗೆ ತುರ್ತು ಪರಿಹಾರವನ್ನು ನೀಡುತ್ತಿತ್ತು. ಅದೇ ರೀತಿಯಲ್ಲಿ ಈಗಿನ ಸರ್ಕಾರವು ಕೂಡ ಸಂತ್ರಸ್ತರನ್ನು ಗುರುತಿಸಿ ಕೂಡಲೇ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದರು. ನದಿ ತೀರದ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ತಂಡದಿAದ ಸರಕಾರಕ್ಕೆ ವರದಿ ಸಲ್ಲಿಸಲಾಗುದು. ಸಂತ್ರಸ್ತರಿಗೆ ಪುನರ್ವಸತಿಗೆ ಗುರುತಿಸಿದ ಜಾಗದಲ್ಲಿ ಕೂಡಲೇ ಶಾಶ್ವತ ಸೂರು ಒದಗಿಸಲು ಸರಕಾರ ಮುಂದಾಗಬೇಕೆAದು ತಿಳಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ನದಿ ತೀರದ ನಿವಾಸಿಗಳ ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು. ಇದಾದ ನಂತರ ಸಿದ್ದಾಪುರದ ಸ್ವರ್ಣಮಾಲದಲ್ಲಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅಶ್ವತ್ಥ ನಾರಾಯಣ ಅವರು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ತಾವುಗಳು ಪುನರ್ವಸತಿ ನೀಡಿದಲ್ಲಿ ಸ್ಥಳಾಂತರಗೊಳ್ಳಲು ಸಿದ್ದರಿದ್ದೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಒಪ್ಪಿದ ಸಂತ್ರಸ್ತರು ತಮಗೆ ಸುಮಾರು ವರ್ಷಗಳಿಂದ ಭರವಸೆಗಳು ಮಾತ್ರ ದೊರೆಯುತ್ತಿದ್ದು, ಪುನರ್‌ವಸತಿ ಲಭಿಸುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಅಲ್ಲದೆ ಕಳೆದ ಮೂರು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಲಸ ಕಾರ್ಯಗಳು ಇಲ್ಲದೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದೇವೆ. ಮಹಿಳಾ ಸಂಘಗಳ ಮೂಲಕ ಪಡೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಅಶ್ವತ್ಥ ನಾರಾಯಣ ಭರವಸೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ವೀರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಪ್ರಧಾನ ಕಾರ್ಯದರ್ಶಿ ಅಜಿತ್ ಕರುಂಬಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ಸಿದ್ದಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ತುಳಸಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಆನಂದ, ಪೂರ್ಣಿಮಾ, ಸಿದ್ದಾಪುರ ಶಕ್ತಿ ಕೇಂದ್ರದ ಅಧ್ಯಕ್ಷ ರೂಪೇಶ್, ಬಿಜೆಪಿ ಪ್ರಮುಖ ಅನಿಲ್ ಶೆಟ್ಟಿ, ಇನ್ನಿತರರು ಹಾಜರಿದ್ದರು.

- ವಾಸು