ಟಿ ಹೆಚ್.ಜೆ. ರಾಕೇಶ್

ಮಡಿಕೇರಿ, ಆ. 1: ದೇವರ ನಾಡು ಕೇರಳ ರಾಜ್ಯದ ವಯನಾಡು ವಿನಲ್ಲಿ ಸಂಭವಿಸಿದ ಜಲಸ್ಫೋಟ-ಗುಡ್ಡ ಕುಸಿತದ ನಂತರ ಕೊಡಗು ಜಿಲ್ಲೆಯಲ್ಲಿಯೂ ಆತಂಕದ ಕರಿ ಛಾಯೆ ಆವರಿಸಿದೆ. 2018ರಲ್ಲಿ ಸಂಭವಿಸಿದ ದುರಂತಗಳು ಕಣ್ಣ ಮುಂದೆ ಬರುತ್ತಿವೆ. ‘ಗುಡ್ಡದ ಭೂತ’ದ ಭಯವೂ ಮೂಡಿದೆ.

ಮುಂಗಾರು ಅಬ್ಬರಿಸಿ ಬೊಬ್ಬಿರಿ ಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಟ್ಟ-ಗುಡ್ಡ, ನದಿ ಅಂಚಿನಲ್ಲಿ ಸೇರಿದಂತೆ ಅಪಾಯದ ಸ್ಥಳದಲ್ಲಿ ನೆಲೆನಿಂತಿರುವವರ ಸ್ಥಳಾಂ ತರ ಒಂದೆ ಪರಿಹಾರ ಎಂಬ ಚರ್ಚೆಯೂ ಎದ್ದಿದೆ. ಜು. 31 ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿರುವ ನಿರ್ದೇಶನವನ್ನು ಜಿಲ್ಲಾಡಳಿತ ಗಂಭೀರವಾಗಿ ತೆಗೆದು ಕೊಂಡಿದೆ. ವಿಜ್ಞಾನಿಗಳ ವರದಿ, ಈ ಹಿಂದೆ ಅಪಾಯ ಸಂಭವಿಸಿದ ಪ್ರದೇ ಶಗಳ ಆಧಾರದಲ್ಲಿ 104 ಸಂಭವ ನೀಯ ಭೂಕುಸಿತ-ಪ್ರವಾಹ ಪ್ರದೇಶಗಳನ್ನು ‘ಮ್ಯಾಪಿಂಗ್’ ಮಾಡ ಲಾಗಿದ್ದು, ಅಪಾಯದ ಸ್ಥಳದಲ್ಲಿರುವ 2995 ಕುಟುಂಬಗಳು ಸ್ಥಳಾಂತರ ಕ್ಕೆಂದು ಗುರುತು ಮಾಡಲಾಗಿದೆ.

ಈಗಾಗಲೇ ಸುಮಾರು 313 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಸದ್ಯ 10 ಪರಿಹಾರ ಕೇಂದ್ರಗಳನ್ನು ಜಿಲ್ಲೆಯಲ್ಲಿ ತೆರೆಯ ಲಾಗಿದೆ. ಅಪಾಯದಲ್ಲಿರುವ ಕೆಲವರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನೂ ಹಲವರು ತಮ್ಮ ಸಂಬAಧಿಕರ ಮನೆಗೆ ಸ್ಥಳಾಂತರ ಗೊಂಡಿದ್ದಾರೆ.

ಆಗಸ್ಟ್ ಆತಂಕ

ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 24 ಹೆಚ್ಚಿನ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ‘ಆಗಸ್ಟ್ ಆತಂಕ’ವೂ ಹುಟ್ಟಿಕೊಂಡಿದೆ.

ಆಗಸ್ಟ್ ಬಂತೆAದರೆ ಜಿಲ್ಲೆಯ ಜನರಲ್ಲಿ ಆತಂಕ, ದುಗುಡ ಹೆಚ್ಚಾಗು ತ್ತದೆ. ಬಿರುಸಿನ ಮಳೆ, ಮೈಕೊರೆಯುವ ಚಳಿಯಲ್ಲಿಯೂ

(ಮೊದಲ ಪುಟದಿಂದ) ಬೆವರುವಂತಹ ಭಯ ಸೃಷ್ಟಿಯಾಗುತ್ತದೆ. 2018 ಆಗಸ್ಟ್ 16 ರಂದು ಜಿಲ್ಲೆಯಲ್ಲಿ ಹಿಂದೆAದು ಕಾಣ ದಂತೆ ಸುರಿದ ಮಹಾಮಳೆ, ಸಂಭವಿ ಸಿದ ಪ್ರಾಕೃತಿಕ ವಿಕೋಪ ಇದಕ್ಕೆಲ್ಲ ಕಾರಣವಾಗಿವೆ. ಈ ವರ್ಷವೂ ಆತಂಕದ ವಾತಾವರಣ ಸೃಷ್ಟಿಯಾ ಗಿದ್ದು, ಅಪಾಯದಂಚಿನಲ್ಲಿರುವವರು ಮುಂದೇನು? ಎಂಬ ತ್ರಿಶಂಕು ಸ್ಥಿತಿಯಲ್ಲಿ ಸಿಲುಕಿದ್ದಾರೆ.

ಸ್ಥಳಾಂತರದ ಚರ್ಚೆಗಳು

ವಯನಾಡುವಿನಲ್ಲಿ ನಡೆದ ದುರ್ಘಟನೆಯ ನಂತರ ಗುಡ್ಡ, ನದಿಯಂಚಿನಲ್ಲಿ ವಾಸಿಸುತ್ತಿರುವವರನ್ನು ಮಳೆಗಾಲದ ಸಂದರ್ಭದಲ್ಲಿ ಸ್ಥಳಾಂತರಿಸಬೇಕೆAಬ ಚರ್ಚೆ ಮುನ್ನಲೆಗೆ ಬಂದಿದೆ. ‘ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ’ ವಿಪತ್ತು ಸಂಭವನೀಯ ಪ್ರದೇಶಗಳ ಪಟ್ಟಿ ನೀಡಿದೆ. ಇದರೊಂದಿಗೆ ಈ ಹಿಂದೆ ಪ್ರಕೃತಿ ದುರಂತ ಸಂಭವಿಸಿದ ಪ್ರದೇಶಗಳನ್ನು ಸೇರಿಸಿ ಸೂಕ್ಷö್ಮ, ಅತೀ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸಿ ಅಂತಿಮಗೊಳಿಸಿರುವ ಜಿಲ್ಲಾಡಳಿತ ಸ್ಥಳಾಂತರ ಮಾಡಬೇಕಾದ ಕುಟುಂಬಗಳನ್ನು ಗುರುತಿಸಿಟ್ಟುಕೊಂಡಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ‘ಬಲವಂತವಾಗಿಯಾದರೂ ಅಪಾಯದ ಸ್ಥಳದಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಬೇಕೆAದು’ ಖಡಕ್ ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಸ್ಥಳಾಂತರ ಕಾರ್ಯದತ್ತ ಅಧಿಕಾರಿಗಳು ಹೆಜ್ಜೆ ಇಡಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಈಗಾಗಲೇ 300ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಗೊಳಿಸಲಾಗಿದೆ. ಇದರೊಂದಿಗೆ ಗುರುತಿಸಿರುವ ಎಲ್ಲರನ್ನು ಸ್ಥಳಾಂತರ ಮಾಡುವುದು ಕಷ್ಟ ಸಾಧ್ಯ ಎಂಬ ತರ್ಕವೂ ಎದ್ದಿದೆ.

2995 ಕುಟುಂಬಗಳ ಗುರುತು

104 ಸಂಭವನೀಯ ವಿಪತ್ತು ಪ್ರದೇಶಗಳ 2995 ಕುಟುಂಬಗಳನ್ನು ಗುರುತಿಸಲಾಗಿದೆ. ಇವರೆಲ್ಲ ಸ್ಥಳಾಂತರ ಪಟ್ಟಿಯಲ್ಲಿದ್ದು, ಯಾವ ಕ್ಷಣದಲ್ಲಾದರು ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ಅಪಾಯದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ನೋಟಿಸ್ ನೀಡಿ ಸ್ಥಳಾಂತರಗೊಳ್ಳುವAತೆ ಸೂಚಿಸಲಾಗಿದೆ. ಕೆಲವರು ಸಂಬAಧಿಕರ ಮನೆಗಳಲ್ಲಿ ನೆಲೆನಿಂತಿದ್ದಾರೆ. ಹಲವರು ಅಪಾಯದ ನಡುವೆಯೇ ಜೀವನ ಮುಂದುವರೆಸಿದ್ದಾರೆ. ಸ್ಥಳಾಂತರವಾಗಿ ಎಂದರೆ ಎಲ್ಲಿಗೆ ಹೋಗುವುದು? ಎಂಬ ಪ್ರಶ್ನೆಯನ್ನು ನಿವಾಸಿಗಳು ಮಾಡುತ್ತಿದ್ದಾರೆ.

ಹೆಚ್ಚುವರಿ 95 ಕಾಳಜಿ ಕೇಂದ್ರ

ಸಂಭವನೀಯ ವಿಪತ್ತು ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯುವ ಸಂಬAಧವೂ ಸ್ಥಳವನ್ನು ಜಿಲ್ಲಾಡಳಿತ ಗುರುತು ಮಾಡಿಟ್ಟುಕೊಂಡಿದೆ. ಸದ್ಯ 10 ಕಾಳಜಿ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 95 ಕಡೆಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಯಾಗಿದೆ. ಆದರೆ, ಜಾನುವಾರುಗಳಿಗೆ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂಬ ದೂರಿದೆ. ಈ ಬಗ್ಗೆಯೂ ಜಿಲ್ಲಾಡಳಿತ ಕ್ರಮವಹಿಸಬೇಕಾಗಿದೆ.

ಒಟ್ಟಾರೆಯಾಗಿ ಪ್ರತಿ ಮಳೆಗಾಲದಲ್ಲಿಯೂ ಗ್ರಾಮೀಣ ಪ್ರದೇಶಗಳ ಜನತೆ ಭೂಕುಸಿತ, ಪ್ರವಾಹದ ಭಯದಲ್ಲಿ ದಿನದೂಡಬೇಕಾದ ಪರಿಸ್ಥಿತಿ ಬಂದಿದ್ದು, ಪ್ರಕೃತಿ ಮುನಿಯದಿರಲಿ ಎಂಬ ಪ್ರಾರ್ಥನೆ ಮೊಳಗುತ್ತಿದೆ.