ಮಡಿಕೇರಿ, ಆ. 1: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ತಾ. 4 ರಂದು ನಡೆಯಲಿದೆ.
ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗುವುದು. ಮುಂದಿನ ವರ್ಷದ ಕಾರ್ಯಯೋಜನೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು.
ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ, ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು, ರಾಷ್ಟಿçÃಯ ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ವಿಜೇತರಾದ ಕ್ರೀಡಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಲಾಗುವುದು.
ಸಂಘದ ಎಲ್ಲಾ ಸದಸ್ಯರು ಹಾಗೂ ಸದಸ್ಯರಾಗಲು ಇಚ್ಚಿಸುವವರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಮನವಿ ಮಾಡಿದ್ದಾರೆ.