ನೈಸ್ ರಸ್ತೆಯಲ್ಲಿ ವಾಹನಗಳಿಗೆ ವೇಗದ ಮಿತಿ ನಿಗದಿ

ಬೆಂಗಳೂರು, ಆ. ೨: ನೈಸ್ ರಸ್ತೆಯಲ್ಲಿ ವಾಹನ ಚಾಲಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಅತಿವೇಗದಿಂದ ಹಲವಾರು ಗಂಭೀರ ಮತ್ತು ಮಾರಣಾಂತಿಕ ಅಪಘಾತಗಳು ಸಂಭವಿಸಿರುವುದರಿAದ ರಸ್ತೆ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬೆಂಗಳೂರು ಸಂಚಾರಿ ಪೊಲೀಸರ ಪ್ರಕಾರ, ಚಾಲಕನ ಆಸನದ ಜೊತೆಗೆ (ಎಂ೧ ವರ್ಗದ ವಾಹನಗಳು) ಹೆಚ್ಚುವರಿಯಾಗಿ ಎಂಟು ಆಸನಗಳನ್ನು ಒಳಗೊಂಡಿರುವ ಪ್ರಯಾಣಿಕರ ಸಾಗಣೆಗೆ ಬಳಸುವ ವಾಹನಗಳಿಗೆ ವೇಗದ ಮಿತಿಯನ್ನು ಗಂಟೆಗೆ ೧೨೦ ಕಿ.ಮೀ. ಎಂದು ನಿಗದಿಪಡಿಸಲಾಗಿದೆ. ಚಾಲಕನ ಆಸನದ ಜೊತೆಗೆ ಒಂಬತ್ತು ಅಥವಾ ಅದಕ್ಕಿಂತ ಹೆಚ್ಚಿನ ಆಸನಗಳನ್ನು ಹೊಂದಿರುವ ಮೋಟಾರು ವಾಹನಗಳಿಗೆ ಗಂಟೆಗೆ ೧೦೦ ಕಿ.ಮೀ. ಮತ್ತು ಸರಕು ಸಾಗಣೆಗೆ ಬಳಸುವ ಮೋಟಾರ್ ಸೈಕಲ್‌ಗಳು ಮತ್ತು ವಾಹನಗಳ ವೇಗದ ಮಿತಿಯನ್ನು ಗಂಟೆಗೆ ೮೦ ಕಿ.ಮೀ. ಎಂದು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು. ಇದಲ್ಲದೇ ನೈಸ್ ರಸ್ತೆಯಲ್ಲಿ ಎಲ್ಲಾ ದಿನ ರಾತ್ರಿ ೧೦ ರಿಂದ ಬೆಳಗಿನ ಜಾವ ೫ ಗಂಟೆಯವರೆಗೆ ದ್ವಿಚಕ್ರ ವಾಹನಗಳನ್ನು ಬಳಸದಂತೆ ಪೊಲೀಸರು ನಿರ್ಬಂಧ ಹೇರಿದ್ದು, ಆಗಸ್ಟ್ ೨ ರಿಂದ ಈ ನಿರ್ಬಂಧಗಳು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ; ದಾಖಲೆಗಳು ಭಸ್ಮ

ಬೆಂಗಳೂರು, ಆ. ೨: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಂದು ಬೆಳಿಗ್ಗೆ ೯ ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ವರ್ಷ ೨೦೨೩ ಆಗಸ್ಟ್ ೧೧ ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ೯ ಮಂದಿ ಗಾಯಗೊಂಡಿದ್ದರು. ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ೯ ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಕನ್ನಡದಲ್ಲಿ ಬರೆಯಲು ಕೇಂದ್ರ ರೈಲ್ವೇ ಇಲಾಖೆ ಅವಕಾಶ

ಬೆಂಗಳೂರು, ಆ. ೨: ನೈಋತ್ಯ ರೈಲ್ವೇ ವತಿಯಿಂದ ನಡೆಯಬೇಕಿರುವ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡಿದೆ. ಇದರಿಂದ ಚಿಂತೆಗೀಡಾಗಿದ್ದ ಕರ್ನಾಟಕದ ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ಇಂದು ರೈಲ್ವೆ ಇಲಾಖೆ ರಾಜ್ಯ ಸಚಿವರಾದ ಸೋಮಣ್ಣ ಅವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ. ಕರ್ನಾಟಕ ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಂದೆAದಿಗೂ ಕಟಿಬದ್ಧವಾಗಿದೆ. ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ. ಸೋಮಣ್ಣ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ. ಆಗಸ್ಟ್ ೩ ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ಆಯ್ಕೆ ನೀಡಲಾಗಿದೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಕನ್ನಡಿಗ ಅಭ್ಯರ್ಥಿಗಳಲ್ಲಿ ಆತಂಕ ಶುರುವಾಗಿತ್ತು. ಅಲ್ಲದೆ, ಆಕ್ರೋಶ ಕೂಡ ವ್ಯಕ್ತವಾಗಿತ್ತು.

ವಯನಾಡಿನಲ್ಲಿ ಕಾಂಗ್ರೆಸ್‌ನಿAದ ೧೦೦ಕ್ಕೂ ಹೆಚ್ಚು ಮನೆಗಳ ನಿರ್ಮಾಣ

ವಯನಾಡು, ಆ. ೨: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂ ಕುಸಿತ, ಇಲ್ಲಿಯವರೆಗೂ ರಾಜ್ಯ ನೋಡಿರದ ಒಂದು ಭೀಕರ ದುರಂತವಾಗಿದ್ದು, ಇದನ್ನು ವಿಭಿನ್ನವಾಗಿ ಪರಿಗಣಿಸ ಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇತರ ಹಿರಿಯ ಕಾಂಗ್ರೆಸ್ ನಾಯಕ ರೊಂದಿಗೆ ಜಿಲ್ಲಾಡಳಿತ ಮತ್ತು ಪಂಚಾಯತ್‌ನ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ವಿಷಯವನ್ನು ಕೇಂದ್ರ ಸರ್ಕಾರ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಪ್ರಸ್ತಾಪಿಸಲಿದ್ದೇನೆ. ಇದು ವಿಭಿನ್ನ ಹಂತದ ದುರಂತವಾಗಿದ್ದು, ವಿಭಿನ್ನವಾಗಿ ಪರಿಗಣಿಸಬೇಕು ಎಂದರು. ಇದೇ ವೇಳೆ ವಯನಾಡಿನಲ್ಲಿ ಕಾಂಗ್ರೆಸ್‌ನಿAದ ೧೦೦ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಸಭೆಯಲ್ಲಿ ವಿನಾಶಕಾರಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ, ನಾಶವಾದ ಮನೆಗಳು ಮತ್ತು ನಾಪತ್ತೆಯಾದವರನ್ನು ಹುಡುಕಲು ಮತ್ತು ರಕ್ಷಿಸಲು ಅನುಸರಿಸುತ್ತಿರುವ ಕಾರ್ಯತಂತ್ರಗಳ ಬಗ್ಗೆ ಅಧಿಕಾರಿಗಳು ರಾಹುಲ್ ಗಾಂಧಿಗೆ ವಿವರಿಸಿದರು. ಭೂಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ ಏರಿಕೆ ಯಾಗುತ್ತಿದ್ದು, ೩೦೦ ರ ಗಡಿ ದಾಟಿದೆ ಎಂದು ವರದಿಗಳು ತಿಳಿಸಿವೆ.

ಗಣಿಗಾರಿಕೆಗೆ ಅವಕಾಶ ನೀಡಿದ್ದು ವಯನಾಡ್ ದುರಂತಕ್ಕೆ ಕಾರಣ

ಬೆಂಗಳೂರು, ಆ. ೨: ಗಾಡ್ಗೀಳ್ ವರದಿ ನಿರ್ಲಕ್ಷಿಸಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿದ್ದು ಮತ್ತು ಕೇರಳ ಸರ್ಕಾರದಿಂದ ಒಂದು ಕೋಮಿನ ತುಷ್ಟೀಕರಣವೇ ಇಂದು ವಯನಾಡಿನಲ್ಲಾಗಿರುವ ದುರಂತಕ್ಕೆ ಕಾರಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ವಯನಾಡು ಭೂಕುಸಿತ ದುರ್ಘಟನೆ ಸಂಬAಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇರಳ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಹಿಂದೆ ಕೇರಳದಲ್ಲಿ ಆಗುವ ಗುಡ್ಡ ಕುಸಿತ, ಭೂ ಕುಸಿತದ ಬಗ್ಗೆ ಖ್ಯಾತ ಪರಿಸರಶಾಸ್ತçಜ್ಞ ಪ್ರೊ. ಮಾಧವ್ ಗಾಡ್ಗೀಳ್ ಅವರು ತಮ್ಮ ನೇತೃತ್ವದ ಪಶ್ಚಿಮ ಘಟ್ಟಗಳ ತಜ್ಞ ಸಮಿತಿ ವರದಿಯಲ್ಲಿ ಉಲ್ಲೇಖಿಸಿದ್ದರು. ವಯನಾಡಿನ ಮೆಪ್ಪಾಡಿ ಯಲ್ಲಿ ಆಗುತ್ತಿರುವ ಕಲ್ಲುಗಣಿಗಾರಿಕೆ ಸೇರಿದಂತೆ ಅನೇಕ ಪರಿಸರ ಹಾನಿಕರ ಚಟುವಟಿಕೆಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಮ್ಮ ಸಮಿತಿಯ ವರದಿಯಲ್ಲಿ ನಿಷ್ಟೂರವಾಗಿ ಬರೆದಿದ್ದರು. ಕಲ್ಲು ಗಣಿಗಾರಿಕೆಯ ಹಕ್ಕುಗಳನ್ನು ಕೊಡಬಾರದು ಎಂದು ಹೇಳಿದ್ದರು. ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯ' ಆಗಿರುವುದರಿಂದ ಇಲ್ಲಿ ಯಾವುದೇ ಗಣಿಗಾರಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದರು. ಆದರೆ, ಅಂದಿನ ಯು.ಪಿ.ಎ ಸರ್ಕಾರ ಪ್ರೊ. ಗಾಡ್ಗೀಳ್ ವರದಿಯನ್ನು ಕಸದ ಬುಟ್ಟಿಗೆ ಹಾಕಿತು. ಪ್ರೊ. ಗಾಡ್ಗೀಳ್ ಹಾಗೂ ತಂಡ ನೀಡಿದ್ದ ವರದಿಯನ್ನು ಕರಾರುವಕ್ಕಾಗಿ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲದೆ ಅನುಷ್ಠಾನಗೊಳಿಸಿದ್ದರೆ ಅಪಾರವಾದ ಸಾವು-ನೋವುಗಳನ್ನು ತಡೆಯಬಹುದಾಗಿತ್ತು ಎಂದು ಅಭಿಪ್ರಾಯಿಸಿದ್ದಾರೆ.