ಮಡಿಕೇರಿ, ಆ. 1: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಸಹಯೋಗದೊಂದಿಗೆ ತಾ. 4 ರಂದು ಮಡಿಕೇರಿ ಕೊಡವ ಸಮಾಜದ ಆವರಣದಲ್ಲಿ ಕಕ್ಕಡ ನಮ್ಮೆಯನ್ನು ಏರ್ಪಡಿಸಲಾಗಿದೆ ಎಂದು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಉದ್ಯಮಿ ಕುಪ್ಪಂಡ ಛಾಯಾ ನಂಜಪ್ಪ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಮ್ಮ ಪಾಲ್ಗೊಳ್ಳಲಿದ್ದಾರೆ. ‘ಕಕ್ಕಡ ತಿಂಗತ್‌ರ ನೈಪು - ಪೈಪು - ತೀನಿ’ ವಿಷಯದ ಬಗ್ಗೆ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ವಿಚಾರ ಮಂಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಕ್ಕಡ ವಿಶೇಷ ತಿನಿಸುಗಳ ಸ್ಪರ್ಧೆ ಹಾಗೂ ಪ್ರದರ್ಶನವಿರುತ್ತದೆ.
ಅಕಾಡೆಮಿ ಪ್ರಕಟಿತ ಪುಸ್ತಕಗಳ ಪ್ರದರ್ಶನ, ಮಾರಾಟ, ಉರ್‌ಟಿಕೊಟ್ಟ್ಪಾಟ್, ಪೊಮ್ಮಕ್ಕಡ ಕೂಟದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬರಲಿವೆ ಎಂದು ಮಹೇಶ್ ನಾಚಯ್ಯ ಮಾಹಿತಿಯಿತ್ತರು. ಕಾರ್ಯಕ್ರಮದ ಹೆಚ್ಚಿನ ಮಾಹಿತಿಗೆ, ಕಕ್ಕಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವರು. ತಾ. 3 ರ ಮಧ್ಯಾಹ್ನ 12 ಗಂಟೆ ಒಳಗಾಗಿ 08272-229074, 9742728805 ದೂರವಾಣಿಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದೆAದರು.
ಅಕಾಡೆಮಿಯ ರಿಜಿಸ್ಟಾçರ್ ಅಜ್ಜಿಕುಟ್ಟಿರ ಸಿ. ಗಿರೀಶ್ ಮಾತನಾಡಿ, ಯುವ ಜನಾಂಗಕ್ಕೆ ಕೊಡಗಿನ ಸಂಸೃತಿ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಕಕ್ಕಡ ನಮ್ಮೆ ಹಮ್ಮಿಕೊಳ್ಳಲಾಗಿದೆ ಎಂದರು. ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಮ್ಮ ಮಾತನಾಡಿ, ಕಕ್ಕಡನಮ್ಮೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಚಾಲಕರಾದ ಕಂಬೆಯAಡ ಡೀನಾ ಬೋಜಣ್ಣ, ಚೊಟ್ಟೆಯಂಡ ಸಂಜು ಕಾವೇರಪ್ಪ, ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಬೊಳ್ಳಜಿರ ಯಮುನಾ ಅಯ್ಯಪ್ಪ ಉಪಸ್ಥಿತರಿದ್ದರು.