ಮಡಿಕೇರಿ, ಆ. 1: ಆಗಸ್ಟ್ 15 ರಂದು ಅರ್ಥಪೂರ್ಣವಾಗಿ ಸ್ವಾತಂತ್ರö್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೆಚ್ಚಿನ ಮಳೆ ಇರುವುದರಿಂದ ಕಳೆದ ಬಾರಿಯಂತೆ ನಗರದ ಕೋಟೆ ಆವರಣದಲ್ಲಿ ಈ ಬಾರಿಯೂ ಸ್ವಾತಂತ್ರö್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು. ಆವರಣದಲ್ಲಿ ಕಾರ್ಯಕ್ರಮ ಆಯೋಜಿಸುವ ಸಂಬAಧ ‘ಎಎಸ್‌ಐ’ ಅವರಿಂದ ಅನುಮತಿ ಪಡೆಯುವಂತೆ ನಗರಸಭೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮಳೆ ಕಡಿಮೆಯಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಬೇರೆ ಬೇರೆ ಶಾಲೆಗಳಿಗೂ ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತು, ಉಪಾಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಉಪ ಸಮಿತಿಗಳು ಕಳೆದ ಬಾರಿಯಂತೆ ತಮ್ಮ ಕೆಲಸಗಳನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ಸ್ವಾಗತ ಸಮಿತಿಯವರು ಶಿಷ್ಟಾಚಾರದಂತೆ ಆಹ್ವಾನ ಪತ್ರ ಮುದ್ರಣ ಮತ್ತು ತಲುಪಿಸುವುದು, ಮತ್ತಿತರ ಕಾರ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಧ್ವಜಾರೋಹಣ ಸಂಬAಧ ಅಗತ್ಯ ತಯಾರಿ ಮಾಡಿಕೊಳ್ಳುವುದು, ವೇದಿಕೆ ಸಮಿತಿಯವರು ಕಳೆದ ಬಾರಿಯಂತೆ ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವುದು, ಮತ್ತಿತರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.

ಕವಾಯತನ್ನು ನಿಗದಿತ ಸಮಯಕ್ಕೆ ಸರಿಯಾಗಿ ಆಯೋಜಿಸುವುದು, ರಿಹರ್ಸಲ್ ಮಾಡಿಕೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವನ್ನು ಸಂಬAಧಪಟ್ಟ ಸಮಿತಿಯವರು ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಸರ್ಕಾರದ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೊಡಗು ಜಿಲ್ಲೆಗೆ ಪ್ರಕಟಿಸಿರುವ ಕಾರ್ಯಕ್ರಮಗಳ ಬಗ್ಗೆ ಭಾಷಣ ತಯಾರಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗೌರವಿ ಸುವುದು, ಸ್ವಾತಂತ್ರö್ಯ ದಿನಾಚರಣೆ ಯನ್ನು ಅರ್ಥಪೂರ್ಣ ವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಮಾತನಾಡಿ, ಕವಾಯತು ಸಂಬAಧಿಸಿ ದಂತೆ ಪೊಲೀಸ್, ಎನ್‌ಸಿಸಿ, ಅರಣ್ಯ, ಗೃಹರಕ್ಷಕ ದಳ ಹೀಗೆ ವಿವಿಧ ಕವಾಯತುಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ ಅವರು ವಿವಿಧ ಶಾಲೆಗಳ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸ್ವಾತಂತ್ರö್ಯ ದಿನಾಚರಣೆಗೂ ಮೊದಲು ರಿಹರ್ಸಲ್ ನಡೆಯಲಿದ್ದು, ಆ ಸಂದರ್ಭದಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕಿದೆ ಎಂದು ಕೋರಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು. ವಿವಿಧ ಉಪ ಸಮಿತಿಗಳಿಗೆ ವಹಿಸಿರುವ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಸ್ವಾತಂತ್ರö್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಲಹೆ ಮಾಡಿದರು.

ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಬಸಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಪಿಆರ್‌ಇಡಿ ಇಇ ಸುರೇಶ್ ಕುಮಾರ್, ಪೌರಾಯುಕ್ತ ವಿಜಯ್, ಐಡಿಡಿಪಿ ಇಲಾಖೆ ಅಧಿಕಾರಿ ಎಸ್. ಹೊನ್ನೇಗೌಡ, ಜಿಲ್ಲಾ ಸಂಖ್ಯಾಧಿಕಾರಿ ನಾರಾಯಣ, ಡಿಎಚ್‌ಒ ಡಾ. ಸತೀಶ್ ಕುಮಾರ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಇತರರು ಇದ್ದರು.