ಕುಶಾಲನಗರ, ಆ. ೩:ಮೂಡ ನಿವೇಶನ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಸ್ತಾಪಿಸಿ ರಾಜ್ಯಪಾಲರು ನೋಟಿಸ್ ನೀಡಿದ್ದ ಪ್ರಕರಣ ಕೇಂದ್ರ ಸರಕಾರದ ರಾಜಕೀಯ ಪಿತೂರಿಯಾಗಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ ವಿರುದ್ದ ಪ್ರತಿಭಟನೆ ನಡೆಯಿತು.
ನಗರ ಕಾಂಗ್ರೆಸ್ ಕಚೇರಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾಕಾರರು ಮೆರವಣಿಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರದ ಬಿಜೆಪಿ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ, ಸಂವಿಧಾನ ವಿರೋಧಿ ಕಾರ್ಯ ನಡೆಸುತ್ತಿದ್ದಾರೆ. ಕರ್ನಾಟಕದ ರಾಜ್ಯಪಾಲರು ಕೇಂದ್ರದ ಕೈಗೊಂಬೆಯAತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.
ಈ ಸಂದರ್ಭ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೇಂದ್ರ ಸರಕಾರ ಕರ್ನಾಟಕದ ಮುಖ್ಯಮಂತ್ರಿ ವಿರುದ್ಧ ಇ.ಡಿ., ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ಹತ್ತಿಕ್ಕುವ ಪ್ರಯತ್ನ ನಡಸುತ್ತಿರುವುದು ಖಂಡನೀಯ ಎಂದರು. ನಂತರ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ನಗರ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ನಟೇಶ್ ಗೌಡ, ಪ್ರಮುಖರಾದ ಶಿವಶಂಕರ್, ಕಿರಣ್, ಪದ್ಮಾ, ಜಗದೀಶ್, ಶಾಜಿ, ಖಲೀಮುಲ್ಲಾ, ಟಿ.ಪಿ. ಹಮೀದ್, ನವೀನ್ ಗೌಡ, ಬಿ.ಡಿ. ಅಣ್ಣಯ್ಯ, ರಫೀಕ್, ಶಿವಮ್ಮ, ಕೃಷ್ಣೇಗೌಡ, ಶೇಖರ್, ಆದಂ, ಮತ್ತಿತರರು ಇದ್ದರು.