ಮಡಿಕೇರಿ, ಆ. ೩: ಕುತಂತ್ರದಿAದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು.
ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವ ಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ ೩೨ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶ ಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿAದ ದೇವಟ್ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟಿçÃಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟç ಸಂಸ್ಥೆ ಯು.ಎನ್.ಓ. ಅಂತರರಾಷ್ಟಿçÃಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು.
ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಕೊಡವ ಸಾಂಪ್ರದಾಯಿಕ ``ಸಂಸ್ಕಾರ ಗನ್'' ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಒತ್ತಾಯವನ್ನು ಮುಂದಿಟ್ಟುಕೊAಡು ಕಳೆದ ಅನೇಕ ವರ್ಷಗಳಿಂದ ಸಿ.ಎನ್.ಸಿ. ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಈ ಹಕ್ಕುಗಳು ಶೀಘ್ರ ಈಡೇರಲಿ ಎಂದು ಹಿರಿಯರಲ್ಲಿ ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದರು. ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪAಡ ಮನೋಜ್, ಚೀಯಬೆರ ಸತೀಶ್, ಆಲಮಂಡ ನೆಹರು ಹಾಗೂ ಅಪ್ಪಾರಂಡ ಪ್ರಕಾಶ್ ಅವರುಗಳು ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು.