ಸೋಮವಾರಪೇಟೆ, ಆ. ೪: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಫಾರ್ ಸ್ಕಿಲ್ ತರಬೇತಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೇರಗಳಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ವಿನೋದ್ ಕುಮಾರ್ ವಹಿಸಿದ್ದರು. ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಇಂತಹ ತರಬೇತಿ ಕಾರ್ಯಕ್ರಮ ಆಯೋಜಿಸುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರ ಪ್ರಯೋಜನವನ್ನು ಗ್ರಾಮೀಣ ಭಾಗದ ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ತಿಳಿಸಿದರು .

ಡಿಜಿ ವಿಕಸನ ಕೇಂದ್ರದ ಜಿಲ್ಲಾ ಸಂಯೋಜಕ ರಕ್ಷಿತ್, ತಾಲೂಕು ವ್ಯವಸ್ಥಾಪಕ ದಿಲೀಪ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿನೋದ್, ಡಿಜಿಟಲ್ ಗ್ರಂಥಾಲಯ ಮೇಲ್ವಿಚಾರಕಿ ಪದ್ಮಾವತಿ, ಡೀಲಾಕ್ಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.