ಗೋಣಿಕೊಪ್ಪ ವರದಿ, ಆ. ೨೯: ಅಕ್ಟೋಬರ್ ೬ ರಂದು ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಅಮ್ಮತ್ತೀರ ಕಪ್ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.

ಅಮ್ಮಕೊಡವ ಕುಟುಂಬಗಳ ನಡುವೆ ಪಂದ್ಯಗಳು ನಡೆಯಲಿವೆ. ಎಂದು ಕುಟುಂಬದ ಆಡಳಿತ ಮಂಡಳಿ ನಿರ್ಧರಿಸಿದೆ. ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ. ೫ ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. ೩ ಸಾವಿರ ಹಾಗೂ ಟ್ರೋಫಿ ನೀಡಲಾಗುವುದು. ಮಕ್ಕಳಿಗೆ ಆಟೋಟ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕುಟುಂಬದ ಪ್ರಕಟಣೆ ತಿಳಿಸಿದೆ.