ಪೊನ್ನಂಪೇಟೆ, ಆ. ೨೯ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಕೆ.ಎಂ.ಎ. ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನಿಸಲಾಗಿದೆ.

೨೦೨೩-೨೪ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು ಕೆ.ಎಂ.ಎ. ಪ್ರತಿಭಾ ಪುರಸ್ಕಾರ-೨೦೨೪ಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎರಡೂ ವಿಭಾಗದಲ್ಲೂ ಶೇ.೭೫ ಕ್ಕಿಂತ ಮೇಲ್ಪಟ್ಟು ಅಂಕಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅರ್ಹ ವಿದ್ಯಾರ್ಥಿಗಳ ಪೋಷಕರ ಪೈಕಿ ಒಬ್ಬರು (ತಂದೆ ಅಥವಾ ತಾಯಿ) ಕೆ.ಎಂ.ಎ. ಸದಸ್ಯತ್ವ ಪಡೆದು ಕನಿಷ್ಟ ಒಂದು ವರ್ಷ ಪೂರ್ಣಗೊಂಡಿರಬೇಕು.

ಎರಡೂ ವಿಭಾಗಗಳಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಅತೀ ಹೆಚ್ಚು ಅಂಕಪಡೆದ ಆಧಾರದಲ್ಲಿ ತಲಾ ೧೩ ಅರ್ಜಿಗಳನ್ನು ಅಂತಿಮವಾಗಿ ಪರಿಗಣಿಸಲಾಗುವುದು. ಇನ್ನುಳಿದ ೧೦ ಅರ್ಹ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಈಗಾಗಲೇ ಘೋಷಣೆಯಾಗಿರುವ ೨೦೨೩-೨೪ನೇ ಸಾಲಿನ ೫ನೇ, v೭ನೇ ಮತ್ತು ೧೦ನೇ ತರಗತಿಯ ಮದ್ರಸಾ ಪಬ್ಲಿಕ್ ಪರೀಕ್ಷೆಯ ಫಲಿತಾಂಶದಲ್ಲಿ ಹೆಚ್ಚಿನ ಅಂಕಗಳಿಸಿರುವ ಕೆ.ಎಂ.ಎ. ಸದಸ್ಯರ ಮಕ್ಕಳು ಮದರಸ ವಿಭಾಗದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-೨೦೨೪ಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ವಿಭಾಗದಲ್ಲೂ ಅರ್ಜಿ ಸಲ್ಲಿಸಲು ಕನಿಷ್ಟ ಶೇ.೭೫ ಕ್ಕಿಂತ ಮೇಲ್ಪಟ್ಟು ಅಂಕಗಳಿಸಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಶಾಲಾ ಮುಖ್ಯೋಪಾಧ್ಯಾಯರಿಂದ/ ಕಾಲೇಜಿನ ಪ್ರಾಂಶುಪಾಲರಿAದ/ ಮದರಸ ಅಧ್ಯಾಪಕರಿಂದ 'ದೃಢೀಕೃತಗೊಂಡ ಅಂಕಪಟ್ಟಿ', ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಬಗ್ಗೆ ಹಾಲಿ 'ವ್ಯಾಸಂಗ ದೃಢೀಕರಣ ಪತ್ರ' ಸೇರಿದಂತೆ ತಮ್ಮ ಮನೆತನದ ಮತ್ತು ಪೋಷಕರ ಪೂರ್ಣ ವಿವರ, ದೂರವಾಣಿ ಸಂಖ್ಯೆ ಹಾಗು ಇತ್ತೀಚಿನ ೩ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಲು ದಿನಾಂಕ ೧೫-೦೯-೨೦೨೪ರಂದು ಕೊನೆಯ ದಿನವಾಗಿರುತ್ತದೆ. ಭಾವಚಿತ್ರ ಮತ್ತು ದೂರವಾಣಿ ಸಂಖ್ಯೆ ಇಲ್ಲದ ಅರ್ಜಿಗಳನ್ನು ಮೊದಲ ಹಂತದಲ್ಲೇ ತಿರಸ್ಕರಿಸಲಾಗುವುದು.

ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ

ಅಧ್ಯಕ್ಷರು, ಕೊಡವ ಮುಸ್ಲಿಂ ಅಸೋಸಿಯೇಷನ್ (ರಿ.), ಪ್ರಧಾನ ಕಚೇರಿ, ಡಿ.ಎಚ್.ಎಸ್. ಕಟ್ಟಡ, ಮುಖ್ಯ ರಸ್ತೆ, ವೀರಾಜಪೇಟೆ, ಕೊಡಗು ಜಿಲ್ಲೆ, ಪಿನ್ ಕೋಡ್: ೫೭೧೨೧೮. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೮೮೬೦೬೦೩೪೨ (ಪ್ರಧಾನ ಕಾರ್ಯದರ್ಶಿ) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.