೫೫

ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ : ಸಹಿಸಲು ಅಸಾಧ್ಯ

ಕೋಲ್ಕತ್ತ, ಆ. ೨೮: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣವನ್ನು ಸಹಿಸುವುದು ಅಸಾಧ್ಯ ಎಂದು ರಾಷ್ಟçಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ರಾಷ್ಟçಪತಿಗಳು, ಮಹಿಳೆಯರ ವಿರುದ್ಧದ ಇಂತಹ ಘೋರ ಅಪರಾಧಗಳನ್ನು ತಡೆಗಟ್ಟಲು ಸಾಮಾಜಿಕ ಪರಿಷ್ಕರಣೆಯ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟçಪತಿಗಳು, ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತನ್ನ ಬೆಂಬಲ ವ್ಯಕ್ತಪಡಿಸಿ ತ್ವರಿತ ನ್ಯಾಯಕ್ಕಾಗಿ ಕರೆ ನೀಡಿದರು.

ಖರ್ಗೆ ಕುಟುಂಬದ ಟ್ರಸ್ಟ್ಗೆ ಭೂಮಿ ಹಂಚಿಕೆಯಲ್ಲಿ ಅಕ್ರಮ : ಬಿಜೆಪಿ

ನವದೆಹಲಿ, ಆ. ೨೮: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ನಡೆಸುತ್ತಿರುವ ಟ್ರಸ್ಟ್ಗೆ ಭೂಮಿ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟಿçÃಯ ವಕ್ತಾರ ಸುಧಾಂಶು ತ್ರಿವೇದಿ ಅವರು, ಕರ್ನಾಟದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿAದಲೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಕರ್ನಾಟಕ ಸರ್ಕಾರ ಖರ್ಗೆ ಅವರ ಕುಟುಂಬಕ್ಕೆ ಬೆಂಗಳೂರಿನಲ್ಲಿ ಭೂಮಿಯನ್ನು ಹರಾಜು ಮಾಡದೆ ಮಂಜೂರು ಮಾಡಿದೆ. ಆದರೆ ಫೆಬ್ರವರಿ ೧೪ ರಂದು, ಕರ್ನಾಟಕ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಕಲ್ಯಾಣ ಇಲಾಖೆಯು ಸಮಾಜ ಕಲ್ಯಾಣಕ್ಕಾಗಿ ತುಂಡು ಭೂಮಿಯನ್ನು ಕೇಳಿತ್ತು. ಅದಕ್ಕೆ ಮಂಜೂರು ಮಾಡಲಾಗಿಲ್ಲ. ಅದರಂತೆ ೭೨ ಇತರ ಅರ್ಜಿದಾರರು ಸರದಿ ಸಾಲಿನಲ್ಲಿದ್ದರೂ ಖರ್ಗೆ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಭೂಮಿ ಹಂಚಿಕೆಗೆ ಇ-ಹರಾಜು ಏಕೆ ಮಾಡಲಿಲ್ಲ? ಎಂದು ನಾನು ಕರ್ನಾಟಕ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರದ ಒಂದೊAದೇ ಪ್ರಕರಣಗಳು ಹೊರಬರುತ್ತಿವೆ ಎಂದು ಬಿಜೆಪಿ ನಾಯಕ ವಾಗ್ದಾಳಿ ನಡೆಸಿದರು. ಬಿಜೆಪಿ ಚುಕ್ಕಾಣಿ ಹಿಡಿದಾಗ ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೆಲವೇ ನಾಯಕರ ಅಭಿವೃದ್ಧಿಯಾಗುತ್ತಿದೆ ಎಂದು ಟೀಕಿಸಿದರು.

ಅಪಹರಣ ಪ್ರಕರಣ : ರೇವಣ್ಣಗೆ ರಿಲೀಫ್

ಬೆಂಗಳೂರು, ಆ. ೨೮: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬAಧಿಸಿದAತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಇದರಿಂದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವೀಡಿಯೋ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬAಧಿಸಿದAತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಎಸ್‌ಐಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ರೇವಣ್ಣ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ. ರಾಜಗೋಪಾಲ್, ಹೆಚ್.ಕೆ. ಸುಜಯ್, ಹೆಚ್.ಎನ್. ಮಧು, ಎಸ್.ಟಿ. ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.