ಸೋಮವಾರಪೇಟೆ, ಆ. ೨೯: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಪ್ರಕ್ಷÄಬ್ಧ ಪರಿಸ್ಥಿತಿಯ ನಡುವೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದ್ದು, ಹಿಂದೂ ದೇವಾಲಯಗಳ ಧ್ವಂಸ ನಡೆಯುತ್ತಿದೆ. ತಕ್ಷಣ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಅಲ್ಲಿನ ಹಿಂದೂಗಳ ರಕ್ಷಣೆಗೆ ಮುಂದಾಗಬೇಕೆAದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬಾಂಗ್ಲಾದೇಶದಲ್ಲಿ ೨೭ ಸ್ಥಳಗಳಲ್ಲಿ ಹಿಂದೂಗಳನ್ನು ಗುರಿ ಯಾಗಿಸಿ ದೌರ್ಜನ್ಯ ನಡೆಸಲಾಗುತ್ತಿದೆ. ಉದ್ದೇಶ ಪೂರ್ವಕವಾಗಿ ಹಿಂದೂ ಗಳನ್ನು ಹತ್ಯೆ ಮಾಡಲಾಗುತ್ತಿದೆ. ಹಿಂದೂಗಳ ಮನೆ, ಅಂಗಡಿಗಳ ಮೇಲೆ ದಾಳಿ ನಡೆಸಿ ಲೂಟಿ ಮಾಡಲಾಗುತ್ತಿದೆ. ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗುತ್ತಿದೆ. ಮಾಧ್ಯಮಗಳ ಮೇಲೂ ಧಮನಕಾರಿ ನೀತಿ ಅನುಸರಿ ಸಲಾಗುತ್ತಿದೆ ಎಂದು ಪದಾಧಿಕಾರಿಗಳು ಆರೋಪಿಸಿದರು. ಮನವಿಯನ್ನು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭ ಸಮಿತಿಯ ಪದಾಧಿಕಾರಿಗಳಾದ ಪಿ. ಮಧು, ಮಂಜುನಾಥ್ ಶಿಲ್ಪಿ, ಪ್ರಸಾದ್ ಭಟ್, ಪವಿತ್ರ ಡಿ.ಡಿ., ರಜಿನಿ, ನಿಖಿಲ್, ಕೆ.ಎನ್. ತೇಜಸ್ವಿ, ತೇಜು ಸೇರಿದಂತೆ ಇತರರು ಉಪಸ್ಥಿತರಿದ್ದರು.